- Advertisement -
![]()
- Advertisement -
ಬೆಂಗಳೂರು : 84 ವರ್ಷದವರಾಗಿದ್ದ ಪ್ರೊ. ಜಿ.ಕೆ. ಗೋವಿಂದ ರಾವ್ ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ 4.45ರ ಸುಮಾರಿಗೆ ಸಾವನ್ನಪ್ಪಿದ್ದಾರೆ.
ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ಕಲಾವಿದರಾಗಿಯೂ ಗುರುತಿಸಿಕೊಂಡಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಧಾರಾವಾಹಿ ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ, ಚಲನಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು. ಜಿ.ಕೆ.ಗೋವಿಂದರಾವ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದು, ಜನಪರ ನಿಲುವಿನಿಂದ ಜನಮಾನಸದಲ್ಲಿ ವಿಶಿಷ್ಟ ಸ್ಥಾನ ಗಳಿಸಿದ್ದರು. ಒಬ್ಬ ಅನನ್ಯ ಚಿಂತಕರನ್ನು ನಾಡು ಕಳೆದುಕೊಂಡಂತಾಗಿದೆ. ಮೃತರ ಆತ್ಮಕ್ಕೆ ಆ ದೇವರು ಶಾಂತಿ ನೀಡಲಿ ಎಂದು ನುಡಿದಿದ್ದಾರೆ.
- Advertisement -


