Saturday, June 13, 2026
Homeಕರಾವಳಿಉಡುಪಿಉಡುಪಿ: ಹುಟ್ಟೂರಿನ ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ

ಉಡುಪಿ: ಹುಟ್ಟೂರಿನ ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ

- Advertisement -
- Advertisement -

ಉಡುಪಿ: ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ಹುಟ್ಟೂರಿನ ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗಿಯಾಗಿ ಪೂಜೆ ಸಲ್ಲಿಸಿದ್ದಾರೆ.

ಉಡುಪಿಯ ಅಲೆವೂರು ಸಾರ್ವಜನಿಕ ಗಣೇಶೋತ್ಸವದ ಧಾರ್ಮಿಕ ಕಾರ್ಯಕ್ರಮದಲ್ಲಿ ರಕ್ಷಿತ್ ಶೆಟ್ಟಿ ಭಾಗಿಯಾಗಿದ್ದರು.

ಉಡುಪಿ ತಾಲೂಕಿನ ಕುಕ್ಕಿಕಟ್ಟೆ ನಿವಾಸಿಯಾಗಿರುವ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ, ತನ್ನ ಹುಟ್ಟೂರು ಅಲೆವೂರಿನ ಸಾರ್ವಜನಿಕ ಗಣೇಶೋತ್ಸವದ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರತಿ ವರ್ಷವೂ ಭಾಗಿಯಾಗುತ್ತಾ ಬಂದಿದ್ದಾರೆ.

ನಂತರ ಅಲೆವೂರು ಕಟ್ಟೆ ಗಣಪತಿ ದೇವಸ್ಥಾನಕ್ಕೆ ಕೂಡಾ ಭೇಟಿ ನೀಡಿದ ರಕ್ಷಿತ್ ಶೆಟ್ಟಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.ಹುಟ್ಟೂರಿನ ಭೇಟಿ ವೇಳೆ ತನ್ನ ಅಭಿಮಾನಿಗಳ ಜೊತೆಗೆ ನಟ ರಕ್ಷಿತ್ ಶೆಟ್ಟಿ ಸೆಲ್ಫಿ ಮತ್ತು ಪೋಟೋ ತೆಗೆಸಿಕೊಂಡರು.ಈ ವೇಳೆ ಕೇಮಾರು ಶ್ರೀ ಈಶ ವಿಠ್ಠಲದಾಸ ಜೊತೆಗಿದ್ದರು.

- Advertisement -

Latest News

error: Content is protected !!