Thursday, July 16, 2026
Homeಕರಾವಳಿಉಡುಪಿಕುಂದಾಪುರ;ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದತ್ತು ಪಡೆದ ನಟ ರಿಷಭ್ ಶೆಟ್ಟಿ

ಕುಂದಾಪುರ;ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದತ್ತು ಪಡೆದ ನಟ ರಿಷಭ್ ಶೆಟ್ಟಿ

- Advertisement -
- Advertisement -

ಕುಂದಾಪುರ: ಕನ್ನಡ ಚಲನಚಿತ್ರ ನಟ ಮತ್ತು ನಿರ್ದೇಶಕ ರಿಷಭ್ ಶೆಟ್ಟಿ ಕೆರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಪಡೆದಿದ್ದಾರೆ.

ರಿಷಭ್ ಶೆಟ್ಟಿ ಫೌಂಡೇಶನ್ ಮೂಲಕ ಕುಂದಾಪುರ ತಾಲೂಕಿನ ಕೆರಾಡಿಯಲ್ಲಿರುವ ತಾನು ಓದಿದ ಪ್ರಾಥಮಿಕ ಶಾಲೆಯನ್ನು ದತ್ತು ಪಡೆದಿದ್ದಾರೆ. ಕೆರಾಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಇಂದು ಶಾಲೆಗೆ ಭೇಟಿ ನೀಡಿ ಕನ್ನಡ ಶಾಲೆ ಉಳಿಸುವ ಮತ್ತು ಬೆಳೆಸುವ ತನ್ನ ಕನಸನ್ನು ರಿಷಭ್ ಶೆಟ್ಟಿ ಬಿಚ್ಚಿಟ್ಟರು.

ಈ ಸಂದರ್ಭದಲ್ಲಿ ಊರಿನ ಪ್ರಮುಖರು ಮತ್ತು ಹಿರಿಯರು ಉಪಸ್ಥಿತರಿದ್ದು ಹುಟ್ಟೂರಿನ ಶಾಲೆಯನ್ನು ದತ್ತು ಪಡೆದ ರಿಷಭ್ ಶೆಟ್ಟಿಯವರನ್ನು ಅಭಿನಂದಿಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಕನ್ನಡ ಸಿನೆಮಾದ ಮೂಲಕ ಕನ್ನಡ ಶಾಲೆಗಳ ಉಳಿವಿನ ಬಗ್ಗೆ ರಿಷಭ್ ಶೆಟ್ಟಿ ಜಾಗೃತಿ ಮೂಡಿಸಿದ್ದರು. ತೆರೆ ಕಂಡ ಬಳಿಕ ಈ ಸಿನಿಮಾ ರಾಜ್ಯದಲ್ಲಿ ಹಲವಾರು ಕನ್ನಡ ಶಾಲೆಗಳ ಉಳಿವಿಗೆ ಸ್ಫೂರ್ತಿಯಾಗಿತ್ತು.

- Advertisement -

Latest News

error: Content is protected !!