Saturday, June 13, 2026
Homeತಾಜಾ ಸುದ್ದಿಭೀಕರ ರಸ್ತೆ ಅಪಘಾತ; ನಟ ಸಂಚಾರಿ ವಿಜಯ್ ಸ್ಥಿತಿ ಗಂಭೀರ

ಭೀಕರ ರಸ್ತೆ ಅಪಘಾತ; ನಟ ಸಂಚಾರಿ ವಿಜಯ್ ಸ್ಥಿತಿ ಗಂಭೀರ

- Advertisement -
- Advertisement -

ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಭೀಕರ ರಸ್ತೆ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ನೇಹಿತನೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಅಪಘಾತಕ್ಕೀಡಾಗಿದ್ದು, ನಿನ್ನೆ ರಾತ್ರಿಯೇ ಅವರನ್ನು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವವಾಗಿದ್ದರಿಂದ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಅಲ್ಲದೇ ಅವರ ತೊಡೆಯ ಭಾಗದಲ್ಲಿ ಮೂಳೆ ಮುರಿದಿದ್ದು, ಆಪರೇಶನ್ ಮಾಡಲಾಗಿದೆ ಎಂದು ಆಸ್ಪತ್ರೆ ವೈದ್ಯ ಡಾ.ಅನಿಲ್ ಕುಮಾರ್ ತಿಳಿಸಿದ್ದಾರೆ.

ಶಸ್ತ್ರ ಚಿಕಿತ್ಸೆ ಮಾಡಿದ ಹಿನ್ನೆಲೆಯಲ್ಲಿ, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಮುಂದಿನ 48 ಗಂಟೆ ಏನೂ ಹೇಳಲು ಸಾಧ್ಯವಿಲ್ಲ ಎಂದು ನ್ಯೂರೋ ಸರ್ಜನ್ ಅರುಣ್ ನಾಯಕ್ ತಿಳಿಸಿದ್ದಾರೆ.

ಈ ಅವಘಡಕ್ಕೆ ಸಂಚಾರಿ ವಿಜಯ್ ಹೆಲ್ಮೆಟ್ ಹಾಕದೇ ಪ್ರಯಾಣ ಬೆಳೆಸಿದ್ದೆ ಕಾರಣ ಎಂದು ಹೇಳಲಾಗುತ್ತಿದೆ. ಜೆಪಿ ನಗರದ 7ನೇ ಫೇಸ್ ಬಳಿ ಸ್ನೇಹಿತನ ಜತೆಗೆ ಇವರು ಹಿಂಬದಿಯಲ್ಲಿ ಹೆಲ್ಮೆಟ್​ ಧರಿಸದೇ ಕುಳಿತು ಪ್ರಯಾಣಿಸಿದ್ದಾರೆ.

- Advertisement -

Latest News

error: Content is protected !!