Saturday, June 6, 2026
HomeUncategorizedನಟ ಶರಣ್ ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ನಟ ಶರಣ್ ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

- Advertisement -
- Advertisement -

ಬೆಂಗಳೂರು : ನಟ ಶರಣ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಅವತಾರ ಪುರುಷ ಸಿನಿಮಾದ ಚಿತ್ರೀಕರಣ ವೇಳೆಯಲ್ಲಿ ನಟ ಶರಣ್ ಗೆ ಹೊಟ್ಟೆನೋವು ಕಾಣಿಸಿಕೊಂಡಿದೆ.  ಕೂಡಲೇ ನಿರ್ದೇಶಕ ಸಿಂಪಲ್ ಸುನಿ  ಹಾಗೂ ಸಿನಿಮಾದ ನಿರ್ಮಾಪಕರು ಆಸ್ಪತ್ರೆಗೆ ದಾಖಲಿಸಿದ್ದಾರೆ.ಅವತಾರ ಪುರುಷ ಸಿನಿಮಾ ಶೂಟಿಂಗ್ ಬೆಂಗಳೂರಿನ ಹೆಚ್ ಎಂಟಿ ಗ್ರೌಂಡ್ ನಲ್ಲಿ ನಡೆಯುತ್ತಿತ್ತು.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ನಟಿ ಶೃತಿ ಅಣ್ಣನಿಗೆ ಏನು ಆಗಿಲ್ಲ. ಅವರು ಆರೋಗ್ಯವಾಗಿದ್ದಾರೆ. ಕಿಡ್ನಿ ಸ್ಟೋನ್ ಆಗಿದ್ದರಿಂದ ಹೊಟ್ಟೆನೋವು ಕಾಣಿಸಿಕೊಂಡಿದೆ ಎಂದು ಅವರು ಹೇಳಿದ್ದಾರೆ.ಅಲ್ಲದೇ ಚಿಕಿತ್ಸೆ ಬಳಿಕ ಅವರು ಮನೆಗೆ ಮರಳುತ್ತಾರೆ ಅಂತಾ ಶೃತಿ ಹೇಳಿದ್ದಾರೆ.

- Advertisement -

Latest News

error: Content is protected !!