Thursday, April 18, 2024
Homeತಾಜಾ ಸುದ್ದಿಅಮೃತವರ್ಷಿಣಿ ಸಿನಿಮಾ ಖ್ಯಾತಿಯ ಬಹುಭಾಷಾ ನಟ ಶರತ್ ಬಾಬು ನಿಧನ

ಅಮೃತವರ್ಷಿಣಿ ಸಿನಿಮಾ ಖ್ಯಾತಿಯ ಬಹುಭಾಷಾ ನಟ ಶರತ್ ಬಾಬು ನಿಧನ

spot_img
- Advertisement -
- Advertisement -

ಹೈದರಾಬಾದ್ : ಅಮೃತವರ್ಷಿಣಿ ಸಿನಿಮಾ ಖ್ಯಾತಿಯ ಬಹುಭಾಷಾ ನಟ ಶರತ್ ಬಾಬು (71) ನಿಧನ ಇಂದು ಹೈದರಾಬಾದ್ ನಲ್ಲಿ ನಿಧನರಾಗಿದ್ದಾರೆ. ಶರತ್ ಬಾಬು ಅವರು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲವು ದಿನಗಳ ಹಿಂದೆ ಶರತ್ ಬಾಬು ನಿಧನರಾಗಿದ್ದಾರೆ ಎಂದು ಸುದ್ದಿಯಾಗಿತ್ತು. ಬಳಿಕ ಕುಟುಂಬದವರು ಅದನ್ನು ಅಲ್ಲಗಳೆದಿದ್ದರು. ಇಂದು ಶರತ್ ಬಾಬು ನಿಧನರಾಗಿದ್ದಾರೆ.

ಏಪ್ರಿಲ್​ನ ಮೊದಲ ವಾರದಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿ ಚೇತರಿಸಿಕೊಂಡ ಬಳಿಕ ಅವರನ್ನು ಹೈದರಾಬಾದ್​ಗೆ ಕರೆದೊಯ್ಯಲಾಗಿತ್ತು. ಅದಾದ ಬಳಿಕ ಅಲ್ಲಿ ಮತ್ತೆ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಶರತ್ ಬಾಬು ತೆಲುಗು, ತಮಿಳು, ಕನ್ನಡ ಚಿತ್ರರಂಗದಲ್ಲಿ ಬಹು ಜನಪ್ರಿಯ ನಟರಾಗಿದ್ದವರು. ಸಿನಿಮಾ ನಾಯಕನಾಗಿ, ಎರಡನೇ ನಾಯಕನಾಗಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ತಮ್ಮ 40 ವರ್ಷದ ಸಿನಿ ಬದುಕಿನಲ್ಲಿ ಸುಮಾರು 200 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಶರತ್ ಬಾಬು ನಟಿಸಿದ್ದಾರೆ.

ಶರತ್ ಬಾಬು 2000ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಯಾವುದೇ ಪಾತ್ರ ಮಾಡಿದರೂ ಅದರಲ್ಲಿ ತಲ್ಲೀನರಾಗಿರುವ ವ್ಯಕ್ತಿ ಶರತ್ ಬಾಬು. ಅವರು 1973ರಲ್ಲಿ ರಾಮರಾಜ್ಯಂ ಚಿತ್ರದ ಮೂಲಕ ಟಾಲಿವುಡ್ ಇಂಡಸ್ಟ್ರಿಗೆ ಪ್ರವೇಶಿಸಿದರು. ಆ ನಂತರ ಕನ್ನಡ ಸಿನಿಮಾದಲ್ಲಿ ನಟಿಸಿದ್ದರು. ಈ ನಟ ಮೂರು ಬಾರಿ ಅತ್ಯುತ್ತಮ ಪೋಷಕ ನಟನಾಗಿ ನಂದಿ ಪ್ರಶಸ್ತಿಯನ್ನೂ ಪಡೆದಿದ್ದಾರೆ.

- Advertisement -
spot_img

Latest News

error: Content is protected !!