Tuesday, October 13, 2026
Homeತಾಜಾ ಸುದ್ದಿಪ್ರತಿಭಟನಾ ನಿರತ ರೈತರ ಪರ ದನಿಯಾದ ನಟ ಶಿವರಾಜ್ ಕುಮಾರ್..

ಪ್ರತಿಭಟನಾ ನಿರತ ರೈತರ ಪರ ದನಿಯಾದ ನಟ ಶಿವರಾಜ್ ಕುಮಾರ್..

- Advertisement -
- Advertisement -

ಬೆಂಗಳೂರು: ಯಾರೂ ಹೋರಾಟದ ಬಗ್ಗೆ ಕಾಮೆಂಟ್ ಮಾಡ್ತಿಲ್ಲ ಅಂತಾರೆ.. ಆದ್ರೆ ಅದು ನಮ್ಮಿಂದ, ಇಂಡಸ್ಟ್ರಿಯಿಂದ ಅಥವಾ ಇಡೀ ಭಾರತೀಯ ಸಿನಿಮಾರಂಗ ಬೀದಿ ಇಳಿಯೋದ್ರಿಂದ ಏನೂ ಸಾಧ್ಯವಾಗಲ್ಲ.. ಹಾಗೇ ಆಗೋದಾದ್ರೆ ನಾವು ಬೀದಿಗಿಳಿಯಲು ಸಾಧ್ಯ. ಅದು ಸರ್ಕಾರದಿಂದ ಮಾಡೋಕಷ್ಟೇ ಸಾಧ್ಯ ಎಂದು ಹೇಳುವ ಮೂಲಕ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.

ರೈತರ ಹೋರಾಟದ ಬಗ್ಗೆ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವರಾಜ್​ಕುಮಾರ್​, ರೈತರ ಹೋರಾಟ ನೋಡಿದ್ರೆ ಹೊಟ್ಟೆ ಉರಿಯುತ್ತೆ. ನಮ್ಮ ಕೈಯಲ್ಲಿ ಏನೂ ಇಲ್ಲ. ನಮ್ಮ ಸಪೋರ್ಟ್ ಖಂಡಿತಾ ಇದ್ದೇ ಇರುತ್ತೆ. ಆದ್ರೆ ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ. ನನ್ ಕೈಯಲ್ಲಿ ಅಧಿಕಾರ ಇದ್ದಿದ್ರೆ ಎಲ್ಲವನ್ನೂ ಬರೆದುಕೊಡ್ತಿದ್ದೆ. ಆದ್ರೆ ಅಧಿಕಾರ ನನ್ನ ಕೈಯಲ್ಲಿ ಇಲ್ವಲ್ಲಾ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!