- Advertisement -


- Advertisement -
ಮುಂಬೈ: ನಟ ಟೈಗರ್ ಶ್ರಾಫ್ ಅವರ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಎಲ್ಲಾ 11 ಆರೋಪಿಗಳನ್ನು ನವೆಂಬರ್ 6ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಮುಂಬೈನ ವಿಶೇಷ ಎಂಸಿಒಸಿಎ ನ್ಯಾಯಾಲಯ ಗುರುವಾರ ಆದೇಶಿಸಿದೆ.
ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಅಡಿಯಲ್ಲಿ ಮರುಬಂಧನಕ್ಕೊಳಗಾದ ಆರೋಪಿಗಳನ್ನು ವಿಶೇಷ ನ್ಯಾಯಾಧೀಶ ಸತ್ಯನಾರಾಯಣ ನವಂದರ್ ಅವರ ಮುಂದೆ ಹಾಜರುಪಡಿಸಲಾಯಿತು.ದಾಳಿಯ ಹಿಂದಿರುವ ಸಂಪೂರ್ಣ ಸಂಚನ್ನು ಪತ್ತೆಹಚ್ಚಲು ಆರೋಪಿಗಳ ವಿಚಾರಣೆ ಅಗತ್ಯವಿದೆ. ಹೀಗಾಗಿ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಅಕ್ಟೋಬರ್ 18ರಂದು ಮುಂಬೈನ ಜುಹು ಪ್ರದೇಶದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧಿಸಲಾದ 11 ಆರೋಪಿಗಳ ವಿರುದ್ಧ ಮಂಗಳವಾರ ಪೊಲೀಸರು ಎಂಸಿಒಸಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.
- Advertisement -


