Sunday, June 7, 2026
Homeತಾಜಾ ಸುದ್ದಿಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ತೆರಳಿದ ಕನ್ನಡದ ಖ್ಯಾತ ನಟಿ

ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ತೆರಳಿದ ಕನ್ನಡದ ಖ್ಯಾತ ನಟಿ

- Advertisement -
- Advertisement -

ಬೆಂಗಳೂರು: ಕನ್ನಡದ ಜನಪ್ರಿಯ ನಟಿ ಭಾವನಾ ಅವರು ಮತ್ತೆ ತಮ್ಮ ಮಾತೃಪಕ್ಷ ಕಾಂಗ್ರೆಸ್‌ ಗೆ ಸೇರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಂದೀಪ್‌ ಸುರ್ಜೇವಾಲ, ಕಾಂಗ್ರೆಸ್‌ನ ಮಾಜಿ ಕಾರ್ಯಕರ್ತೆ ಹಾಗೂ ನಟಿ ಭಾವನಾ ರಾಮಣ್ಣ ಅವರು ನನ್ನನ್ನು ಭೇಟಿಯಾದರು. ಕರ್ನಾಟಕದಲ್ಲಿ ಕಾಂಗ್ರೆಸ್‌ ಸೇರಿ, ಪಕ್ಷಕ್ಕಾಗಿ ದುಡಿಯುವ ಸಂಕಲ್ಪವನ್ನು ಅವರು ಮಾಡಿದ್ದಾರೆ. ಪ್ರತಿಯೊಬ್ಬರ ಸೇರ್ಪಡೆಯೊಂದಿಗೆ ಕಾಂಗ್ರೆಸ್‌ ಪಕ್ಷವು ಪ್ರಾಬಲ್ಯ ಸಾಧಿಸಲಿದೆ ಎಂದು ನಾನು ಭಾವಿಸಿದ್ದೇನೆ. ಭಾವನಾ ಅವರಿಗೆ ಶುಭಾಶಯಗಳು ಎಂದು ತಿಳಿಸಿದ್ದಾರೆ.

ಭಾವನಾ ರಾಮಣ್ಣ ಈ ಮೊದಲು ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದರು. ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿಯ ಅಧ್ಯಕ್ಷೆಯಾಗಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಅವರು ಚಿತ್ರದುರ್ಗದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಇವರಿಗೆ ಟಿಕೆಟ್ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ನಿರಾಕರಿಸಿತ್ತು. ಕಾಂಗ್ರೆಸ್ ಮೇಲೆ ಮುನಿಸಿಕೊಂಡು ಸಭೆಯಿಂದ ಹೊರ ನಡೆದಿದ್ದರು. ಅದಾದ ಮೇಲೆ ಕೈ ಗೆ ಗುಡ್ ಬೈ ಹೇಳಿ ಬಿಜೆಪಿಗೆ ಸೇರ್ಪಡೆಯಾಗಿದ್ದಿರು. ಈಗ ಭಾವನಾ ಮತ್ತೆ ತಮ್ಮ ಮಾತೃಪಕ್ಷವನ್ನು ಸೇರಿದ್ದಾರೆ.

- Advertisement -

Latest News

error: Content is protected !!