Thursday, June 4, 2026
Homeತಾಜಾ ಸುದ್ದಿಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಖ್ಯಾತ ನಟಿಯ ಮೃತದೇಹ ಪತ್ತೆ

ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಖ್ಯಾತ ನಟಿಯ ಮೃತದೇಹ ಪತ್ತೆ

- Advertisement -
- Advertisement -

ಚೆನ್ನೈ: ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಖ್ಯಾತ ನಟಿಯ ಮೃತದೇಹ ಪತ್ತೆಯಾಗಿರುವ ಘಟನೆ ಚೆನ್ನೈನ ವಿರುಗಂಬಕ್ಕಂನಲ್ಲಿ ನಡೆದಿದೆ. ನಟಿ ದೀಪಾ ಆಲಿಯಾಸ್ ಪೌಲೆನ್ ಜೆಸ್ಸಿಕಾ ಅವರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂತಾ ಹೇಳಲಾಗ್ತಿದೆ. ವೈಯಕ್ತಿಕ ಕಾರಣದಿಂದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಏಕಾಂಗಿಯಾಗಿ ವಾಸಿಸುತ್ತಿದ್ದ ದೀಪಾ ಒತ್ತಡದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೀಪಾ ಅವರ ಕುಟುಂಬ ಸದಸ್ಯರು ಅವರನ್ನು ಸಂಪರ್ಕಿಸಲು ಕರೆ ಮಾಡಿದರೂ, ಅವರು ಫೋನ್ ಅನ್ನು ಸ್ವೀಕರಿಸುತ್ತಿರಲಿಲ್ಲ ಎನ್ನಲಾಗಿದ್ದು. ದೀಪಾಳ ಸ್ನೇಹಿತ ಫ್ಲಾಟ್ ಗೆ ಹೋದಾಗ ಅವರು ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇರುವುದನ್ನು ನೋಡಿದ್ದು. ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ  ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!