Wednesday, June 3, 2026
Homeತಾಜಾ ಸುದ್ದಿನಟಿ, ರಾಜಕಾರಣಿ ಖುಷ್ಬೂ ಆಸ್ಪತ್ರೆಗೆ ದಾಖಲು

ನಟಿ, ರಾಜಕಾರಣಿ ಖುಷ್ಬೂ ಆಸ್ಪತ್ರೆಗೆ ದಾಖಲು

- Advertisement -
- Advertisement -

ಹೈದ್ರಾಬಾದ್ : ನಟಿ, ರಾಜಕಾರಣಿ ಖುಷ್ಬೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಸ್ವತಃ ನಟಿಮಣಿಯೇ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡಿದ್ದು, ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿಸಿದ್ದಾರೆ.ಇನ್ನು ಆಸ್ಪತ್ರೆಯ ಬೆಡ್ ಮೇಲೆ ಇರುವ ಫೋಟೋಗಳನ್ನ ಹಂಚಿಕೊಂಡಿದ್ದಾರೆ. ಇನ್ನು ತಾನು ನಟಿ ಅಡೆನೊ ವೈರಸ್ ಸೋಂಕಿಗೆ ಒಳಗಾಗಿದ್ದು, ತುಂಬಾ ದುರ್ಬಲರಾಗಿರುವುದಾಗಿ ಹೇಳಿಕೊಂಡಿದ್ದಾರೆ. ಇನ್ನು ಯಾರಿಗಾದ್ರು ವೈರಸ್ ತಗುಲಿರುವ ಲಕ್ಷಣಗಳು ಕಂಡು ಬಂದ್ರೆ ನಿರ್ಲಕ್ಷಿಸಬೇಡಿ ಎಂದು ಖುಷ್ಬೂ ಟ್ವಿಟರ್ ವೇದಿಕೆಯಲ್ಲಿ ಸಲಹೆ ನೀಡಿದ್ದಾರೆ.

ಸಧ್ಯ ಈ ಪೋಸ್ಟ್ ವೈರಲ್ ಆಗುತ್ತಿದ್ದು, ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಅದಷ್ಟೂ ಬೇಗ ಚೇತರಿಸಿಕೊಳ್ಳಿ ಎಂದು ಹಾರೈಸುತ್ತಿದ್ದಾರೆ

- Advertisement -

Latest News

error: Content is protected !!