Wednesday, June 3, 2026
Homeತಾಜಾ ಸುದ್ದಿಪತಿ ಮತ್ತು ಮಾವನ ವಿರುದ್ಧವೇ ಪೊಲೀಸ್ ದೂರು ನೀಡಿದ ಕನ್ನಡದ ಖ್ಯಾತ ಚಲನಚಿತ್ರ ನಟಿ

ಪತಿ ಮತ್ತು ಮಾವನ ವಿರುದ್ಧವೇ ಪೊಲೀಸ್ ದೂರು ನೀಡಿದ ಕನ್ನಡದ ಖ್ಯಾತ ಚಲನಚಿತ್ರ ನಟಿ

- Advertisement -
- Advertisement -

ಮೈಸೂರು: ತಮ್ಮ ಬ್ಯಾಂಕ್ ಖಾತೆಯನ್ನು ದುರ್ಬಳಕೆ ಮಾಡಿದ ಆರೋಪ ಹೊರಿಸಿ ಪತಿ ಮತ್ತು ಮಾವನ ವಿರುದ್ಧವೇ ಚಲನಚಿತ್ರ ನಟಿಯೊಬ್ಬರು ಪೊಲೀಸ್ ದೂರು ದಾಖಲಿಸಿದ್ದಾರೆ.

ಚಲನಚಿತ್ರ ನಟಿ ಚೈತ್ರಾ ಹಳ್ಳಿಕೇರಿ ಅವರಿಂದ ಪೊಲೀಸ್ ಠಾಣೆಗೆ ದೂರು ದಾಖಲಿಸಲ್ಪಟ್ಟಿದ್ದು, ಪತಿ ಮತ್ತು ಮಾವನಿಂದ ಅನುಮತಿ ಇಲ್ಲದೇ ಗೋಲ್ಡ್ ಲೋನ್ ಪಡೆದಿರುವ ಬಗ್ಗೆ ದೂರು ನೀಡಲಾಗಿದೆ.

ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಗೆ ಗಂಡ ಬಾಲಾಜಿ ಪೋತರಾಜ್ ಹಾಗೂ ಮಾವ ಪೋತರಾಜ್ ವಿರುದ್ಧ ಚೈತ್ರಾ ದೂರು ನೀಡಿದ್ದಾರೆ. ಸಹಿ ಪೋರ್ಜರಿ‌ ಮಾಡಿ ಗೋಲ್ಡ್ ಲೋನ್ ಪಡೆದಿದ್ದು, ಬ್ಯಾಂಕ್ ಮ್ಯಾನೇಜರ್ ಕೂಡಾ ಅವ್ಯವಹಾರದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ನಟಿ‌ ಚೈತ್ರಾ, ವಂಚನೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

ಮೂರು ದಿನಗಳ ಹಿಂದೆಯೇ ಚೈತ್ರಾ ದೂರು ನೀಡಿದ್ದು, ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

- Advertisement -

Latest News

error: Content is protected !!