Saturday, June 6, 2026
Homeತಾಜಾ ಸುದ್ದಿಪ್ರಿಯಕರನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಅರಗಿಣಿ’ ಖ್ಯಾತಿಯ ನಟಿ ನವ್ಯಾ ರಾವ್

ಪ್ರಿಯಕರನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಅರಗಿಣಿ’ ಖ್ಯಾತಿಯ ನಟಿ ನವ್ಯಾ ರಾವ್

- Advertisement -
- Advertisement -

ಬೆಂಗಳೂರು: ಪುನರ್ವಿವಾಹ, ಅರಗಿಣಿ’ ಧಾರಾವಾಹಿ ಮೂಲಕ ಖ್ಯಾತಿ ಪಡೆದಿರುವ ನಟಿ ನವ್ಯಾ ರಾವ್, ಇದೀಗ ತಮ್ಮ ಪ್ರಿಯಕರ ವರುಣ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಗಿರಿನಗರದಲ್ಲಿರುವ ಸಾಲಿಗ್ರಾಮ ಪಾರ್ಟಿ ಹಾಲ್‍ನಲ್ಲಿ ನವ್ಯಾ ಮತ್ತು ವರುಣ್ ಮದುವೆ ನಡೆದಿದೆ.

ನವ್ಯಾ ಮತ್ತು ವರುಣ್ ಇವರಿಬ್ಬರ ಪರಿಚಯ ಆಗಿ ಕೇವಲ 8 ತಿಂಗಳು ಕಳೆದಿತ್ತು. ಅಷ್ಟು ಬೇಗನೇ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ದಾಂಪತ್ಯ ಜೀವನಕ್ಕೂ ಕಾಲಿಟ್ಟಿದ್ದಾರೆ. ನವ್ಯಾ ಸ್ನೇಹಿತರೊಬ್ಬರ ಮದುವೆಯಲ್ಲಿ ವರುಣ್‍ನನ್ನು ಭೇಟಿ ಮಾಡಿದ್ದರು. ಅಲ್ಲಿ ಇವರಿಬ್ಬರಿಗೂ ಪರಿಚಯವಾಗಿ ಸ್ನೇಹಿತರಾಗಿದ್ದರು. ಸ್ನೇಹ ಪ್ರೀತಿಯಾಗಿ ವರುಣ್, ನವ್ಯಾಗೆ ಪ್ರಪೋಸ್ ಮಾಡಿದ್ದಾರೆ.

ಆಗ ನವ್ಯಾ ಕೂಡ ಅವರ ಪ್ರೀತಿಯನ್ನು ಒಪ್ಪಿಕೊಂಡಿದ್ದು, ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರು ತಮ್ಮ ಮನೆಯಲ್ಲಿ ಪ್ರೀತಿಯ ವಿಚಾರವನ್ನು ತಿಳಿಸಿದ್ದಾರೆ. ಎರಡು ಮನೆಯವರು ಕೂಡ ಖುಷಿಯಿಂದ ಒಪ್ಪಿಕೊಂಡು ಮದುವೆ ಮಾಡಿಸಿದ್ದಾರೆ.

ನಟಿ ನವ್ಯಾ ಮೊದಲಿಗೆ ‘ಪ್ಯಾಟೆ ಮಂದಿ ಕಾಡಿಗ್ ಬಂದ್ರು’ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು. ಇದಾದ ಬಳಿಕ ಅವರಿಗೆ ‘ಅರಗಿಣಿ’ ಧಾರಾವಾಹಿಯಲ್ಲಿ ನೆಗೆಟಿವ್ ಶೇಡ್‍ನಲ್ಲಿ ಕಾಣಿಸಿಕೊಳ್ಳಲು ಅವಕಾಶ ಬಂದಿತ್ತು. ಈ ಮೂಲಕ ನವ್ಯಾ ಕಿರುತೆರೆಗೆ ಕಾಟ್ಟಿದ್ದರು. ನವ್ಯಾ ಕನ್ನಡ ಮಾತ್ರವಲ್ಲದೇ ತೆಲುಗು ಸೀರಿಯಲ್‍ನಲ್ಲೂ ಅಭಿನಯಿಸಿದ್ದಾರೆ. ಸದ್ಯಕ್ಕೆ ನವ್ಯಾ ‘ರಾಮಸೀತಾ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

- Advertisement -

Latest News

error: Content is protected !!