Thursday, June 4, 2026
Homeತಾಜಾ ಸುದ್ದಿಮೋಹಕ ತಾರೆ ರಮ್ಯಾ ನಾಯಿ ನಾಪತ್ತೆ; ಹುಡುಕಿಕೊಡುವಂತೆ ಸಾರ್ವಜನಿಕರಲ್ಲಿ ಮನವಿ

ಮೋಹಕ ತಾರೆ ರಮ್ಯಾ ನಾಯಿ ನಾಪತ್ತೆ; ಹುಡುಕಿಕೊಡುವಂತೆ ಸಾರ್ವಜನಿಕರಲ್ಲಿ ಮನವಿ

- Advertisement -
- Advertisement -

ಬೆಂಗಳೂರು: ಮೋಹಕ ತಾರೆ ರಮ್ಯಾ ಅವರ ನಾಯಿ ನಾಪತ್ತೆಯಾಗಿದ್ದು ರಮ್ಯಾ ಫುಲ್ ಚಿಂತೆಯಲ್ಲಿದ್ದಾರೆ. ಅಲ್ಲದೇ ಸಾರ್ವಜನಿಕರಲ್ಲಿ ನಾಯಿ ಪತ್ತೆ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ.

ಇನ್ನು ನಾಯಿ ನಾಪತ್ತೆಯಾದ ಹಿನ್ನೆಲೆ ಚುನಾವಣೆ ಪ್ರಚಾರದಲ್ಲಿದ್ದ ಅವರು ತಮ್ಮ ಚುನಾವಣಾ ಪ್ರಚಾರ ಕಾರ್ಯವನ್ನು ಮೊಟಕುಗೊಳಿಸಿ ಬೆಂಗಳೂರಿಗೆ ವಾಪಾಸ್ಸಾಗಿದ್ದಾರೆ.ರಮ್ಯಾ ವಾಸವಿದ್ದ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ತಾಜ್ ವೆಸ್ಟ್ ಎಂಡ್ ಹೋಟೆಲ್ ನಿಂದ ನಾಯಿ ಕಾಣೆಯಾಗಿದೆ ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ತನ್ನ ನೆಚ್ಚಿನ ನಾಯಿಯನ್ನು ಹುಡುಕಿಕೊಡುವಂತೆ ಅವರು ಸಾರ್ವಜನಕರಲ್ಲಿ ಮನವಿ ಮಾಡಿದ್ದಾರೆ.


ನಾಯಿ ಕಾಣೆಯಾಗಿರುವ ಕುರಿತು ಟ್ವೀಟ್ ಮಾಡಿರುವ ರಮ್ಯಾ, ಮೇ 6 ರಿಂದ ನೆಚ್ಚಿನ ನಾಯಿ ಚಾಂಪ್ ಕಾಣೆಯಾಗಿದೆ. ಕರಿ ಬಣ್ಣದ ಪರ್ಟೈಲಿ ತಳಿಯ ನಾಯಿ ಅದಾಗಿದ್ದು ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನವನ್ನು ಕೊಡಲಾಗುವುದು. ಯಾರಿಗಾದರೂ ನಾಯಿ ಕಂಡರೆ 7012708137 ಈ ನಂಬರ್ ಗೆ ಕಾಂಟ್ಯಾಕ್ಟ್ ಮಾಡಿ ಎಂದು ಅವರು ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

- Advertisement -

Latest News

error: Content is protected !!