Wednesday, June 24, 2026
Homeತಾಜಾ ಸುದ್ದಿನಿರ್ದೇಶಕ ರಾಜ್ ನಿಡಿಮೋರು ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ

ನಿರ್ದೇಶಕ ರಾಜ್ ನಿಡಿಮೋರು ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ

- Advertisement -
- Advertisement -

ಹೈದರಾಬಾದ್:  ತೆಲುಗಿನ ಖ್ಯಾತ ನಟಿ ಸಮಂತಾ ನಿರ್ದೇಶಕ ರಾಜ್ ನಿಡಿಮೋರು ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ನಾಗಚೈತನ್ಯ ಅವರಿಂದ ವಿಚ್ಛೇದನ ಪಡೆದ ಬಳಿಕ ಒಂಟಿಯಾಗಿದ್ದ ಸಮಂತಾ ರುತ್ ಪ್ರಭು ನಿರ್ದೇಶಕ ರಾಜ್ ನಿಡಿಮೋರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಬ್ಬರಿಗೂ ಇದು ಎರಡನೇ ವಿವಾಹ.


ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಇಶಾ ಫೌಂಡೇಶನ್‌ ಆವರಣದಲ್ಲಿರುವ ಲಿಂಗಭೈರವಿ ದೇವಿಯ ದೇವಸ್ಥಾನದಲ್ಲಿ ಇಂದು ಸರಳ ವಿವಾಹವಾಗಿದ್ದಾರೆ. ಸಮಂತಾ ಕೆಂಪು ಸೀರೆ ಧರಿಸಿ ಮಿಂಚಿದ್ರೆ, ರಾಜ್ ನಿಡಿಮೋರು ವೈಟ್ & ವೈಟ್ ಕುರ್ತಾ ಧರಿಸಿ ಸರಳವಾಗಿ ಕಾಣಿಸಿಕೊಂಡಿದ್ದಾರೆ.


ಕೆಲವು ತಿಂಗಳಿಂದ ಬಹಿರಂಗವಾಗೇ ಈ ಜೋಡಿ ಕಾಣಿಸ್ಕೊಳ್ತಾ ಬಂದಿತ್ತು. ಇದೀಗ ಗುಟ್ಟಾಗಿ ಕಲ್ಯಾಣವಾಗಿರುವ ವಿಚಾರವನ್ನ ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತ ಘೋಷಣೆ ಮಾಡಿದ್ದಾರೆ. ಮದುವೆಯ ಫೋಟೋಗಳನ್ನ ಸಮಂತಾ ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ.

- Advertisement -

Latest News

error: Content is protected !!