Tuesday, May 14, 2024
Homeತಾಜಾ ಸುದ್ದಿಸ್ಯಾಂಡಲ್ ವುಡ್ ಹಿರಿಯ ನಟಿ ತಾರಾ ತಾಯಿ ನಿಧನ

ಸ್ಯಾಂಡಲ್ ವುಡ್ ಹಿರಿಯ ನಟಿ ತಾರಾ ತಾಯಿ ನಿಧನ

spot_img
- Advertisement -
- Advertisement -

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟಿ ತಾರಾ ಅವರ ತಾಯಿ ಪುಷ್ಪಾ ಟಿ (76) ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ತಾರಾ ಅವರ ಜತೆ ಮೈಸೂರಿನಲ್ಲಿ ಶೂಟಿಂಗ್ ನಲ್ಲಿ ಅವರ ತಾಯಿ ಭಾಗವಹಿಸಿದ್ದರು. ಈ ವೇಳೆ ತೀವ್ರವಾಗಿ ವಾಂತಿಯಾದ ಹಿನ್ನೆಲೆ ತಕ್ಷಣ ಮೈಸೂರಿನ ಜೆಎಸ್ ಎಸ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.

ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ತಾರಾ ಅನುರಾಧಾ ಅವರ ತಾಯಿ ಪುಷ್ಪಾ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಸೇರಿ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಪುಷ್ಪಾ ಅವರಿಗೆ ತಾರಾ ಸಹಿತ ಇಬ್ಬರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ. ಪುಷ್ಪಾ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಜೆ.ಪಿ.ನಗರದ 15ನೇ ಕ್ರಾಸ್ ಬಳಿ ಯಲ್ಲಿರುವ ತಾರಾ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ನಾಳೆ (ಏ.28) ಅಂತ್ಯಕ್ರಿಯೆ ನಡೆಯಲಿದೆ .

- Advertisement -
spot_img

Latest News

error: Content is protected !!