Tuesday, May 21, 2024
Homeಮನರಂಜನೆಮತ್ತೆ ಆತ್ಮಹತ್ಯೆಗೆ ಯತ್ನಿಸಿದ ನಟಿ ವಿಜಯಲಕ್ಷ್ಮೀ, ಆತ್ಮಹತ್ಯೆಗೆ ಯತ್ನಿಸುವ ಮುನ್ನ ನಟಿ ಮಾತನಾಡಿರುವ ವಿಡಿಯೋದಲ್ಲಿ ಏನಿದೆ?

ಮತ್ತೆ ಆತ್ಮಹತ್ಯೆಗೆ ಯತ್ನಿಸಿದ ನಟಿ ವಿಜಯಲಕ್ಷ್ಮೀ, ಆತ್ಮಹತ್ಯೆಗೆ ಯತ್ನಿಸುವ ಮುನ್ನ ನಟಿ ಮಾತನಾಡಿರುವ ವಿಡಿಯೋದಲ್ಲಿ ಏನಿದೆ?

spot_img
- Advertisement -
- Advertisement -

ನಟಿ ಜಯಶ್ರೀ ಸಾವಿನ ಬಗ್ಗೆ ಮಾತಾಡಿದ್ದು, ಭಾರೀ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ನಾಗಮಂಡಲ ಸಿನಿಮಾ ಖ್ಯಾತಿಯ ನಟಿ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಲೈವ್ ವಿಡಿಯೋ ಮಾಡಿದ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ನೇಹಿತರು, ಮತ್ತು ಕುಟುಂಬದವರು ಆಸ್ಪತ್ರೆಗೆ ಸೇರಿಸಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ನಟ ಸೀಮನ್, ರಾಜಕಾರಣಿ ಸೇರಿದಂತೆ ಹಲವರು ನನಗೆ ಬದುಕಲು ಬಿಡುತ್ತಿಲ್ಲ. ನನ್ನ ಸಾವಿಗೆ ಕಾರಣರಾದ ಅವರನ್ನು ಯಾವುದೇ ಕಾರಣಕ್ಕೂ ಬಿಡಬೇಡಿ ಎಂದು ಹೇಳಿದ ಅವರು ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಈ ಬಗ್ಗೆ ಗಮನಕ್ಕೆ ಬರುತ್ತಲೇ ಕುಟುಂಬದವರು, ಸ್ನೇಹಿತರು, ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ವಿಜಯಲಕ್ಷ್ಮಿ ಈ ಹಿಂದೆ ಸಂಕಷ್ಟದ ಸಂದರ್ಭದಲ್ಲಿ ನೆರವಾದ ನಟನೊಬ್ಬನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಇದಾದ ನಂತರದಲ್ಲಿ ವಿಜಯಲಕ್ಷ್ಮಿ ಸಹೋದರಿ ಉಷಾದೇವಿ ನಟನ ಬಳಿ ಕ್ಷಮೆ ಕೋರಿದ್ದರು.

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಟಿ ವಿಜಯಲಕ್ಷ್ಮೀ ಹೇಳಿದ್ದೇನು?

Posted by Maha Xpress on Sunday, 26 July 2020

- Advertisement -
spot_img

Latest News

error: Content is protected !!