Thursday, June 4, 2026
Homeತಾಜಾ ಸುದ್ದಿವಿವೇಕ ಯೋಜನೆಯಡಿ ದ.ಕ. ಮತ್ತು ಉಡುಪಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ತಲಾ 10 ...

ವಿವೇಕ ಯೋಜನೆಯಡಿ ದ.ಕ. ಮತ್ತು ಉಡುಪಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ತಲಾ 10 ಹೆಚ್ಚುವರಿ ಹೊಸ ಶಾಲಾ ಕೊಠಡಿಗಳ ಹಂಚಿಕೆ

- Advertisement -
- Advertisement -

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ತಲಾ ಹತ್ತು ಹೆಚ್ಚುವರಿ ಹೊಸ ಶಾಲಾ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ.

ಈಗಾಗಲೇ ರಾಜ್ಯ ಸರ್ಕಾರ ವಿವೇಕ ಯೋಜನೆಯಡಿ ರಾಜ್ಯದ ಸರ್ಕಾರಿ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 6601ಹೊಸ ಕೊಠಡಿಗಳನ್ನು ನಿರ್ಮಾಣ ಮಾಡಲು ಆದೇಶಿಸಿತ್ತು.ಅದರನ್ವಯ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ತಲಾ 20 ಕೊಠಡಿಗಳಂತೆ 4480 ಕೊಠಡಿಗಳನ್ನು ಹಂಚಿಕೆ ‌ಮಾಡಲಾಗಿತ್ತು.

ಈ ಸಂಬಂಧ 2022-23 ನೇ‌ ಸಾಲಿನಲ್ಲಿ ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲು ಕ್ರಿಯಾ ಯೋಜನೆ ಅನುಮೋದಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗಳು ಆಯುಕ್ತರಿಗೆ ನಿರ್ದೇಶಿಸಿದ್ದಾರೆ.

- Advertisement -

Latest News

error: Content is protected !!