Saturday, May 4, 2024
Homeಕರಾವಳಿಉಡುಪಿಉಡುಪಿಯಲ್ಲಿ ಕಟ್ಟಡ ಕಾಮಗಾರಿಗೆ ಸಾಕಷ್ಟು ಮರಳು ಲಭ್ಯ: ಡಿಸಿ ಕೂರ್ಮಾ ರಾವ್

ಉಡುಪಿಯಲ್ಲಿ ಕಟ್ಟಡ ಕಾಮಗಾರಿಗೆ ಸಾಕಷ್ಟು ಮರಳು ಲಭ್ಯ: ಡಿಸಿ ಕೂರ್ಮಾ ರಾವ್

spot_img
- Advertisement -
- Advertisement -

ಉಡುಪಿ: ಜಿಲ್ಲೆಯಲ್ಲಿ ಕಟ್ಟಡ ಕಾಮಗಾರಿ ಕೈಗೊಳ್ಳಲು ಅಗತ್ಯ ಮರಳು ದಾಸ್ತಾನು ಇದ್ದು, ಸಾರ್ವಜನಿಕರು ಸ್ಯಾಂಡ್ ಆ್ಯಪ್ ಮೂಲಕ ಅರ್ಜಿ ಸಲ್ಲಿಸಿ ಅಗತ್ಯ ಮರಳನ್ನು ಪಡೆಯಬಹುದು ಎಂದು ಜಿಲ್ಲಾಧಿಕಾರಿ (ಡಿಸಿ) ಎಂ.ಕೂರ್ಮಾ ರಾವ್ ತಿಳಿಸಿದ್ದಾರೆ.

ಮರಳು ವಿತರಣೆ ಕುರಿತ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಟ್ಟಡಗಳ ನಿರ್ಮಾಣ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯವಿರುವ ಮರಳನ್ನು ಅಗತ್ಯಕ್ಕೆ ತಕ್ಕಂತೆ ಪಾರದರ್ಶಕವಾಗಿ ಮರಳು ಅರ್ಜಿ ಮೂಲಕ ವಿತರಿಸಲು ಜಿಲ್ಲಾ ಕಾರ್ಯಪಡೆ ಸಮಿತಿ ಮುಂದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಳ್ಳಬೇಕು.

ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳಿವೆ. ಇದನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ. ಮರಳು ಸಾಗಣೆ ವಾಹನಗಳು, ದೋಣಿಗಳಲ್ಲಿ ಅಳವಡಿಸಿರುವ ಜಿಪಿಎಸ್‌ ವ್ಯವಸ್ಥೆ ಪರಿಶೀಲಿಸುವುದರ ಜತೆಗೆ ಕಾನೂನು ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವ ಮೂಲಕ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ’ ಎಂದು ಹೇಳಿದರು.

ಮರಳು ಸ್ಟಾಕ್‌ಯಾರ್ಡ್‌ನಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಡಿಸಿ ಸೂಚಿಸಿದರು. ಕುಂದಾಪುರದಲ್ಲಿ ಬೋಟ್‌ಗಳಲ್ಲಿ ಜಿಪಿಎಸ್ ನಿಯಮ ಉಲ್ಲಂಘಿಸಿದ್ದಕ್ಕಾಗಿ 16 ಪ್ರಕರಣಗಳು ದಾಖಲಾಗಿದ್ದು, ಮರಳು ಪರವಾನಗಿದಾರರಿಂದ 8 ಲಕ್ಷ ರೂಪಾಯಿ ವಸೂಲಿ ಮಾಡಲಾಗಿದೆ.

ಉಡುಪಿ ಮತ್ತು ಬ್ರಹ್ಮಾವರದಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು, ನಿಯಮ ಉಲ್ಲಂಘಿಸಿದವರಿಂದ 50 ಸಾವಿರ ದಂಡ ವಸೂಲಿ ಮಾಡಲಾಗಿದೆ. ಅಲ್ಲದೆ, ಅಕ್ರಮವಾಗಿ ಮರಳು ಸಂಗ್ರಹಿಸಿಟ್ಟವರ ವಿರುದ್ಧ 34 ಪ್ರಕರಣಗಳನ್ನು ದಾಖಲಿಸಿ, 13 ಲಕ್ಷ ರೂ.

ಸರಕಾರಿ ಜಮೀನುಗಳಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಕುಂದಾಪುರ ಡಿಎಫ್ ಒ ಆಶಿಶ್ ರೆಡ್ಡಿ, ಎಡಿಸಿ ಸದಾಶಿವ ಪ್ರಭು, ಕುಂದಾಪುರ ಎಸಿ ರಾಜು ಮತ್ತಿತರರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!