Friday, April 26, 2024
Homeಕರಾವಳಿಪ್ರವೀಣ್ ಹತ್ಯೆ‌ಗೆ ಮೇಲ್ನೋಟಕ್ಕೆ 2-3 ಕಾರಣಗಳು  ಕಂಡು ಬಂದಿವೆ : ಬೆಳ್ಳಾರೆಯಲ್ಲಿ‌ ಎಡಿಜಿಪಿ ಅಲೋಕ್ ಕುಮಾರ್...

ಪ್ರವೀಣ್ ಹತ್ಯೆ‌ಗೆ ಮೇಲ್ನೋಟಕ್ಕೆ 2-3 ಕಾರಣಗಳು  ಕಂಡು ಬಂದಿವೆ : ಬೆಳ್ಳಾರೆಯಲ್ಲಿ‌ ಎಡಿಜಿಪಿ ಅಲೋಕ್ ಕುಮಾರ್ ಸ್ಫೋಟಕ ಮಾಹಿತಿ

spot_img
- Advertisement -
- Advertisement -

ಪುತ್ತೂರು : ಹಿಂದೂ‌ ಕಾರ್ಯಕರ್ತ ಪ್ರವೀಣ್ ಹತ್ಯೆಯ ತನಿಖೆ ಪ್ರಗತಿಯಲ್ಲಿದ್ದು ಹತ್ಯೆಗೆ 2- 3 ಕಾರಣಗಳು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂಬ ಸ್ಫೋಟಕ ಮಾಹಿತಿಯನ್ನು ರಾಜ್ಯದ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ನೀಡಿದ್ದಾರೆ.

ಬೆಳ್ಳಾರೆಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಹತ್ಯೆಯ ಬಗ್ಗೆ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಕರಣದ ಕುರಿತಾಗಿ ಮುಖ್ಯಮಂತ್ರಿಗಳು ಗೃಹಸಚಿವರು ನಿನ್ನೆಯಿಂದ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ನಿನ್ನೆ ಮತ್ತು ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ನೇತ್ರತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದರು.

ಮಂಗಳೂರು ಕಮಿಷನರ್ ಉಡುಪಿ ಪೊಲೀಸರ ಸಹಾಯ ಪಡೆದು ಆರು ತಂಡಗಳನ್ನು ರಚನೆ ಮಾಡಿದ್ದೇವೆ. ಆರೋಪಿಗಳ ಪತ್ತೆಗೆ ಪೊಲೀಸ್ ಅಧಿಕಾರಿಗಳಿಗೆ ಅವಕಾಶ ಕೊಡಬೇಕು ಎಂದು ಅವರು ವಿನಂತಿಸಿದರು.

ಪೊಲೀಸರು ವಶಕ್ಕೆ ಪಡೆದವರು ಕೃತ್ಯದಲ್ಲಿ ಭಾಗಿಯಾದವರೇ ಅಥಾವ ಪರೋಕ್ಷವಾಗಿ ಸಹಕರಿಸಿದವರೇ ಎಂಬ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ. ಆರೋಪಿಗಳನ್ನು ದಸ್ತಗಿರಿ ಮಾಡಿದ ಮೇಲೆ ಹತ್ಯೆಗೆ ಕಾರಣ ತಿಳಿಸುತ್ತೇವೆ. ವಿಚಾರಣೆ ಹಂತದಲ್ಲಿ ನಾನು ಇಷ್ಟು ಮಾತ್ರ ಹೇಳಬಲ್ಲೆ ಎಂದು ಅಲೋಕ್ ಕುಮಾರ್ ತಿಳಿಸಿದರು.

ಅಂತಿಮ ದರ್ಶನಕ್ಕೆ ಸಂಸದರು ಸಚಿವರುಗಳು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಜನರು ಭಾವಾವೇಶದಿಂದ ವಾಹನವನ್ನು ತಳ್ಳಲು ಪ್ರಯತ್ನ ಮಾಡಿದ್ದಾರೆ. ಪರಿಸ್ಥಿತಿ ಹತೋಟಿಗೆ ತರಲು ಲಘುಲಾಠಿ ಪ್ರಹಾರ ಮಾಡಬೇಕಾಯಿತು ಎಂದು ಲಾಠಿ ಚಾರ್ಜ್ ಘಟನೆಯ ಬಗ್ಗೆ ವಿವರಿಸಿದರು.

ಜಿಲ್ಲಾಧಿಕಾರಿಗಳು ಸೆಕ್ಷನ್ 144 ಜಾರಿ ಮಾಡಿದ್ದಾರೆ ಪರಿಸ್ಥಿತಿ ಹತೋಟಿಯಲ್ಲಿದೆ. ಜನರು ಯಾರು ಗುಂಪು ಕಟ್ಟಿ ಓಡಾಡಬಾರದು ಎಂದು ತಿಳಿಸಿದರು.

- Advertisement -
spot_img

Latest News

error: Content is protected !!