Friday, June 5, 2026
Homeಕರಾವಳಿಮಂಗಳೂರು: ಬೆಳ್ಳಾರೆ ಪೊಲೀಸ್ ಠಾಣೆಗೆ ಎಡಿಜಿಪಿ ಭೇಟಿ: ಅಲೋಕ್ ಕುಮಾರ್ ಗೆ ತನಿಖೆಯ ಬಗ್ಗೆ...

ಮಂಗಳೂರು: ಬೆಳ್ಳಾರೆ ಪೊಲೀಸ್ ಠಾಣೆಗೆ ಎಡಿಜಿಪಿ ಭೇಟಿ: ಅಲೋಕ್ ಕುಮಾರ್ ಗೆ ತನಿಖೆಯ ಬಗ್ಗೆ ಮಾಹಿತಿ ನೀಡಿದ ಎನ್.ಐ.ಎ ಅಧಿಕಾರಿಗಳು

- Advertisement -
- Advertisement -

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಭರದಿಂದ ಸಾಗಿದೆ. ಈ ಹಿನ್ನೆಲೆ ಬೆಳ್ಳಾರೆ ಪೊಲೀಸ್ ಠಾಣೆಗೆ ಎಡಿಜಿಪಿ ಅಲೋಕ್ ಕುಮಾರ್  ಅವರು  ಐಜಿಪಿ ದೇವಜ್ಯೋತಿ ರೇ, ಎಸ್ಪಿ ಋಷಿಕೇಶ್ ಭಗವಾನ್  ಸೋನಾವಣೆ, ಡಿವೈಎಸ್ಪಿ ಗಾನಾ ಕುಮಾರಿ ಜೊತೆ ಭೇಟಿ ನೀಡಿದರು.

ಠಾಣೆಗೆ ಬಂದ ಕೂಡಲೇ ಪೊಲೀಸರಿಗೆ ಠಾಣಾ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಭದ್ರತೆಗೆ ಎಡಿಜಿಪಿ ಸೂಚನೆ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಏರ್ಪಡಿಸಲು ಸೂಚನೆ ನೀಡಿದ್ದಾರೆ.

ಪ್ರವೀಣ್ ಹತ್ಯೆ ಆರೋಪಿಗಳ ಬಂಧನವಾಗದ ಹಿನ್ನೆಲೆ ದಿಢೀರ್ ಭೇಟಿ ನೀಡಿದ್ದಾರೆ. ಪ್ರಕರಣದ ತನಿಖಾಧಿಕಾರಿಗಳನ್ನ ಕರೆದು ಈವರೆಗಿನ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಎನ್.ಐ.ಎ ಅಧಿಕಾರಿಗಳು ಇದೇ ವೇಳೆ ಅಲೋಕ್‌ ಕುಮಾರ್ ಅವರನ್ನು ಭೇಟಿ ಮಾಡಿದರು. ಐದು ಜನರಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳ ತಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!