Thursday, June 4, 2026
Homeತಾಜಾ ಸುದ್ದಿಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ: ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅರೆಸ್ಟ್

ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ: ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅರೆಸ್ಟ್

- Advertisement -
- Advertisement -

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಪೊಲೀಸ್ ನೇಮಕಾತಿ ವಿಭಾಗದ ಹಿಂದಿನ ಮುಖ್ಯಸ್ಥರಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಎಡಿಜಿಪಿ ಅಮೃತ್ ಪೌಲ್ ಬಂಧನವಾಗಿದೆ‌.

ಈಗಾಗಲೇ ಮೂರು ಸಲ ವಿಚಾರಣೆ ನಡೆಸಿರುವ ಸಿಐಡಿ ಅಧಿಕಾರಿಗಳು ಇಂದು ನಾಲ್ಕನೇ ಬಾರಿ ವಿಚಾರಣೆ ಸಂದರ್ಭದಲ್ಲಿ ಅಮೃತ್ ಪೌಲ್ ಅವರನ್ನು ಬಂಧನಕ್ಕೆ ಒಳಪಡಿಸಿದ್ದಾರೆ.

ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಎರಡು ದಿನ ವಿಚಾರಣೆ ಎದುರಿಸಿದ್ದ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಮೂರನೇ ವಿಚಾರಣೆಗೆ ಗೈರು ಹಾಜರಾಗಿದ್ದರು.‌ ಅನಾರೋಗ್ಯದ ಕಾರಣ ನೀಡಿ ವಿಚಾರಣೆಯಿಂದ ದೂರ ಉಳಿದಿದ್ದರು.

ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮದಲ್ಲಿ ಶಾಮೀಲಾಗಿರುವುದು ಮೇಲ್ನೋಟಕ್ಕೆ ದೃಢಪಟ್ಟ ಕಾರಣ ಅವರನ್ನು ಬಂಧನ ಮಾಡಲಾಗಿದೆ.

ಅಕ್ರಮ ಪ್ರಕರಣದಲ್ಲಿ ಇದೇ ಮೊದಲ ಬಾರಿಗೆ ಎಡಿಜಿಪಿ ದರ್ಜೆಯ ಐಪಿಎಸ್ ಅಧಿಕಾರಿಯನ್ನು ಬಂಧಿಸಲಾಗಿದೆ.

- Advertisement -

Latest News

error: Content is protected !!