Saturday, May 4, 2024
Homeತಾಜಾ ಸುದ್ದಿಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ: ADGP ಅಮೃತಪೌಲ್ ಬಂಧನವೇ ಇದಕ್ಕೆ ಸಾಕ್ಷಿ- ಸಿದ್ದರಾಮಯ್ಯ

ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ: ADGP ಅಮೃತಪೌಲ್ ಬಂಧನವೇ ಇದಕ್ಕೆ ಸಾಕ್ಷಿ- ಸಿದ್ದರಾಮಯ್ಯ

spot_img
- Advertisement -
- Advertisement -

ಬೆಂಗಳೂರು: ಪಿಎಸ್ ಐ ಹಗರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ( ನೇಮಕಾತಿ) ಅಮೃತ್ ಪೌಲ್ ಅವರನ್ನು ಸಿಐಡಿ ಬಂಧನ ಮಾಡಿದ್ದು, ಆರಗ ಜ್ಞಾನೇಂದ್ರರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿದ ಸಿದ್ದರಾಮಯ್ಯ, ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ. PSI ನೇಮಕಾತಿ ಹಗರಣದಲ್ಲಿ ADGP ಅಮೃತಪೌಲ್ ಬಂಧನವೇ ಇದಕ್ಕೆ ಸಾಕ್ಷಿ ಎಂದಿದ್ದಾರೆ.

ಹಗರಣವೇ ನಡೆದಿಲ್ಲ ಎಂದು ಮೈಮೇಲೆ ಬರುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ಈಗ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ. PSI ನೇಮಕಾತಿ ಹಗರಣದಲ್ಲಿ ಅಧಿಕಾರಿಗಳನ್ನು ಮಾತ್ರ ಹೊಣೆಮಾಡಿ ಜಾರಿಕೊಳ್ಳುವುದು ಬೇಡ. ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ. ಅವರು ಮೊದಲು ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

- Advertisement -
spot_img

Latest News

error: Content is protected !!