Wednesday, May 8, 2024
Homeಕರಾವಳಿತಲಪಾಡಿ : ಕೋವಿಡ್ ನೆಗೆಟಿವ್ ವರದಿ ಇಲ್ಲದೆ ರಾಜ್ಯದೊಳಗೆ ಪ್ರವೇಶ ನೀಡಬೇಡಿ:ಎಡಿಜಿಪಿ ಪ್ರತಾಪ್ ರೆಡ್ಡಿ ಖಡಕ್...

ತಲಪಾಡಿ : ಕೋವಿಡ್ ನೆಗೆಟಿವ್ ವರದಿ ಇಲ್ಲದೆ ರಾಜ್ಯದೊಳಗೆ ಪ್ರವೇಶ ನೀಡಬೇಡಿ:ಎಡಿಜಿಪಿ ಪ್ರತಾಪ್ ರೆಡ್ಡಿ ಖಡಕ್ ಸೂಚನೆ!

spot_img
- Advertisement -
- Advertisement -

ಮಂಗಳೂರು: ಕೇರಳದಲ್ಲಿ ಕೊರೋನ ಪ್ರಕರಣ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಮಂಗಳೂರು- ಕಾಸರಗೋಡು ಗಡಿ ಭಾಗ ತಲಪಾಡಿಯಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಡಿಜಿಪಿ ಪ್ರತಾಪ್ ರೆಡ್ಡಿ ಸೂಚನೆ ನೀಡಿದ್ದಾರೆ.

ತಲಪಾಡಿಗೆ ಇಂದು ಭೇಟಿ ನೀಡಿದ ಅವರು, ರಾಜ್ಯ ಸರಕಾರದ ಸೂಚನೆಯಂತೆ ಕೋವಿಡ್ ನೆಗೆಟಿವ್ ವರದಿ ಇಲ್ಲದೆ ರಾಜ್ಯದೊಳಗೆ ಪ್ರವೇಶ ನೀಡದಂತೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೇವಲ ತುರ್ತು ಭೇಟಿ ಹಾಗೂ ಕೇರಳ ಭಾಗದ ವಿದ್ಯಾರ್ಥಿಗಳು ಪರೀಕ್ಷಾ ಹಾಲ್ ಟಿಕೆಟ್ ತೋರಿಸಿದರೆ ಅವಕಾಶ ನೀಡಲಾಗುತ್ತದೆ. ಕಾಸರಗೋಡು ಭಾಗದಲ್ಲಿ ಕೊರೋನ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಈ ಬಿಗಿ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಎಡಿಜಿಪಿ ಪ್ರತಾಪ್ ರೆಡ್ಡಿ ಹೇಳಿದ್ದಾರೆ.

ಕೇರಳದಿಂದ ರೈಲು ಮಾರ್ಗವಾಗಿ ಬಂದವರನ್ನೂ ಪರೀಕ್ಷೆ ಮಾಡುತ್ತಿದ್ದೇವೆ. ಮಂಗಳೂರಿನ ಟೌನ್ ಹಾಲ್ ನಲ್ಲಿ ಪರೀಕ್ಷಾ ಕೇಂದ್ರ ತೆರೆದಿದ್ದೇವೆ ಎಂದರು. ಕಾಸರಗೋಡು ಡಿಸಿ,ಎಸ್ಪಿ ಜೊತೆ ಜಿಲ್ಲೆಯ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ,ಉಭಯ ಜಿಲ್ಲೆಗಳ ನಡುವೆ ಯಾವುದೇ ಗೊಂದಲಗಳಿಲ್ಲ. ಕೇರಳದಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುವ ತನಕ ಈ ನಿರ್ಬಂಧ ಇರುತ್ತದೆ ಎಂದು ಹೇಳಿದ್ದಾರೆ.

ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ, ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್‌ ಶಶಿಕುಮಾರ್‌ ಹಾಗೂ ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಜರಿದ್ದರು.

ತಲಪಾಡಿ ಗಡಿ ಬಂದ್ ವಿರೋಧಿಸಿ ಕೇರಳಿಗರಿಂದ ಗಡಿಭಾಗದಲ್ಲಿ ಪ್ರತಿಭಟನೆ:

ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ವೇಳೆ, ಕೇರಳ ಭಾಗದ ರಸ್ತೆ ಬಂದ್ ಮಾಡಿ ಗಡಿಭಾಗದಲ್ಲಿ ಕೇರಳಿಗರು ಪ್ರತಿಭಟನೆ ನಡೆಸಿದರು.ನೆಗೆಟಿವ್ ವರದಿ ಕಡ್ಡಾಯ ಆದೇಶನ್ನು ಹಿಂಪಡೆಯಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಕೇರಳಕ್ಕೆ ತೆರಳುವ ವಾಹನಗಳು ತಲಪಾಡಿ ಬಳಿ ಸಾಲುಗಟ್ಟಿ ನಿಂತಿವೆ.ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ವೇಳೆ ಪ್ರತಿಭಟನೆ ನಡೆಸಿದ ಗಡಿನಾಡ ಪ್ರತಿಭಟನಾಕಾರರು. ಪ್ರತಿಭಟನೆ ಮಧ್ಯೆಯೂ ಗಡಿ ಪರಿಶೀಲನೆ ‌ನಡೆಸಿ ಪ್ರತಾಪ್ ರೆಡ್ಡಿ ತೆರೆಳಿದ್ದಾರೆ.


- Advertisement -
spot_img

Latest News

error: Content is protected !!