Thursday, June 4, 2026
Homeತಾಜಾ ಸುದ್ದಿವೋಟರ್ ಐಡಿ ಜೊತೆ ಆಧಾರ್ ಲಿಂಕ್ ಕಡ್ಡಾಯವಲ್ಲ: ಚುನಾವಣಾ ಆಯೋಗದಿಂದ ಸ್ಪಷ್ಟೀಕರಣ

ವೋಟರ್ ಐಡಿ ಜೊತೆ ಆಧಾರ್ ಲಿಂಕ್ ಕಡ್ಡಾಯವಲ್ಲ: ಚುನಾವಣಾ ಆಯೋಗದಿಂದ ಸ್ಪಷ್ಟೀಕರಣ

- Advertisement -
- Advertisement -

ಬೆಂಗಳೂರು: ಮತದಾನದ ಗುರುತಿನ ಚೀಟಿ ಜೊತೆ ಆಧಾರ್ ಕಾರ್ಡ್ ಜೋಡಣೆ ಕಡ್ಡಾಯವಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಚುನಾವಣಾ ಆಯೋಗ, ಮತದಾರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆಯ ಜೋಡಣೆ ಕಡ್ಡಾಯವಲ್ಲ ಎಂದು ಸ್ಪಷ್ಟೀಕರಣ ನೀಡಿದೆ.

ಮತದಾರರು ಸ್ವಯಂಪ್ರೇರಿತರಾಗಿ ಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆಯನ್ನು ಬಳಸಿ ಅಥವಾ ಇತರೆ ನಿಗದಿತ ದಾಖಲೆಗಳ ಮೂಲಕವೂ ಸಹ ಗುರುತಿಸಿ ದೃಢೀಕರಿಸಿ ಜೋಡಣೆ ಮಾಡಬಹುದಾಗಿರುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಕೆಲವು ದಿನಗಳಿಂದ ವೋಟರ್ ಐಡಿ ಜೊತೆ ಆಧಾರ್ ಸಂಖ್ಯೆ ಕಡ್ಡಾಯ ಎಂಬ‌ ಮಾಹಿತಿ ಹರಿದಾಡಿದ್ದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಈ ಸ್ಪಷ್ಟೀಕರಣ ನೀಡಿದೆ.‌

- Advertisement -

Latest News

error: Content is protected !!