Saturday, December 14, 2024
Homeಕರಾವಳಿಉಡುಪಿಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ; ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ...

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ; ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

spot_img
- Advertisement -
- Advertisement -

ಬೆಂಗಳೂರು : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮುಂದೂಡಿಕೆಯಾಗಿದೆ.ಅರ್ಜಿ ವಿಚಾರಣೆಯನ್ನು ಜುಲೈ.26ಕ್ಕೆ ಹೈಕೋರ್ಟ್ ನಿಗದಿಪಡಿಸಿದೆ.

ಅಲ್ಲಿಯವರೆಗೆ ಖುದ್ದು ಹಾಜರಾತಿಯಿಂದ ಬಿ.ಎಸ್.​ಯಡಿಯೂರಪ್ಪಗೆ ವಿನಾಯಿತಿ ನೀಡಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಧ್ಯಂತರ ಆದೇಶ ನೀಡಿದೆ.ಇತರೆ ಆರೋಪಿಗಳಿಗೂ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಲಾಗಿದ್ದು, ಆರೋಪಿಗಳ ಬದಲಿಗೆ ವಕೀಲರು ಹಾಜರಾಗಿ ವಿನಾಯಿತಿ ಕೋರಲು ಅವಕಾಶ ನೀಡಲಾಗಿದೆ.

ಜುಲೈ.15ರಂದು ಖುದ್ದಾಗಿ ಹಾಜರಾಗುವಂತೆ ಯಡಿಯೂರಪ್ಪಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು. ಇತ್ತೀಚೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಲಾಗಿತ್ತು.

- Advertisement -
spot_img

Latest News

error: Content is protected !!