Sunday, June 7, 2026
Homeಕರಾವಳಿಉಡುಪಿಉಡುಪಿ: ಆಟೋರಿಕ್ಷಾಗಳಿಗೆ ಕಡ್ಡಾಯವಾಗಿ ವಲಯ ಸ್ಟಿಕ್ಕರ್‌ಗಳನ್ನು ಅಳವಡಿಸಿಕೊಳ್ಳುವಂತೆ ಸೂಚನೆ: ಜೆ.ಪಿ ಗಂಗಾಧರ

ಉಡುಪಿ: ಆಟೋರಿಕ್ಷಾಗಳಿಗೆ ಕಡ್ಡಾಯವಾಗಿ ವಲಯ ಸ್ಟಿಕ್ಕರ್‌ಗಳನ್ನು ಅಳವಡಿಸಿಕೊಳ್ಳುವಂತೆ ಸೂಚನೆ: ಜೆ.ಪಿ ಗಂಗಾಧರ

- Advertisement -
- Advertisement -

ಉಡುಪಿ ಮತ್ತು ಕುಂದಾಪುರ ತಾಲೂಕಿನ ಆಟೋರಿಕ್ಷಾ ಚಾಲಕ ಹಾಗೂ ಮಾಲಕರು ಆಟೋರಿಕ್ಷಾಗಳಿಗೆ ಕಡ್ಡಾಯವಾಗಿ ವಲಯ ಸ್ಟಿಕ್ಕರ್‌ಗಳನ್ನು ಅಳವಡಿಸಿಕೊಳ್ಳುವಂತೆ ಈಗಾಗಲೇ ಸೂಚನೆ ನೀಡಲಾಗಿತ್ತು.

ಇದುವರೆಗೂ ವಲಯ ಸ್ಟಿಕ್ಕರ್ ಅಳವಡಿಸಲು ಉಳಿದಿರುವ ಆಟೋರಿಕ್ಷಾ ಮಾಲಕರು ವಾಹನದ ಮೂಲ ದಾಖಲೆಗಳೊಂದಿಗೆ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಕಚೇರಿಗೆ ಹಾಜರಾಗಿ ವಲಯ ಸ್ಟಿಕ್ಕರ್ ಅನ್ನು ಕೂಡಲೇ ಪಡೆದು ಹಾಕಬೇಕು.

ತಪ್ಪಿದ್ದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ ಗಂಗಾಧರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

- Advertisement -

Latest News

error: Content is protected !!