Thursday, May 2, 2024
Homeತಾಜಾ ಸುದ್ದಿರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಅಡ್ವಾಣಿ, ಜೋಷಿಗಿಲ್ಲ ಪ್ರವೇಶ

ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಅಡ್ವಾಣಿ, ಜೋಷಿಗಿಲ್ಲ ಪ್ರವೇಶ

spot_img
- Advertisement -
- Advertisement -

ದೆಹಲಿಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಸಿದ್ಧತೆಗಳು ಭರ್ಜರಿಯಾಗಿ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ರಾಜಕೀಯ ಗಣ್ಯರು, ಉದ್ಯಮಿಗಳು, ನಟರು ಸೇರಿದಂತೆ 2000ಕ್ಕೂ ಅಧಿಕ ವಿಶೇಷ ಅತಿಥಿಗಳು ಭಾಗವಹಿಸಲಿದ್ದಾರೆ.

2024ರ ಲೋಕಸಭೆಗೆ ಕೆಲವೇ ತಿಂಗಳುಗಳು ಬಾಕಿಯಿರುವಾಗಲೇ ರಾಮಮಂದಿರದ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಆದರೆ ಮುಖ್ಯವಾಗಿ ರಾಮಮಂದಿರ ಆಂದೋಲನದಲ್ಲಿ ಭಾಗವಹಿಸಿದ್ದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರನ್ನು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಿಂದ ದೂರ ಇಡಲಾಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರಲ್ಲಿ ವಯಸ್ಸಿನ ಕಾರಣ ಮುಂದಿಟ್ಟು ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಮನವಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಮಾತನಾಡಿ, “ಬಿಜೆಪಿ ನಾಯಕರಾದ ಎಲ್.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸದಂತೆ ಮನವಿ ಮಾಡಲಾಗಿದೆ. ಆರೋಗ್ಯ ಮತ್ತು ವಯಸ್ಸಿನ ಕಾರಣಗಳಿಂದ ನಾವು ಈ ವಿನಂತಿಯನ್ನು ಮಾಡಿದ್ದೇವೆ. ಇದಕ್ಕೆ ಇಬ್ಬರೂ ಕೂಡ ಒಪ್ಪಿಕೊಂಡಿದ್ದಾರೆ,” ಎಂದು ಹೇಳಿದ್ದಾರೆ.

ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡ, ದಲೈ ಲಾಮಾ, ನಟರಾದ ರಜನಿಕಾಂತ್, ಅಮಿತಾಬ್ ಬಚ್ಚನ್, ಮಾಧುರಿ ದೀಕ್ಷಿತ್ ಮತ್ತು ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಅನಿಲ್ ಅಂಬಾನಿ ಸೇರಿದಂತೆ ಹಲವು ಪ್ರಮುಖ ನಾಯಕರು, ಉದ್ಯಮಿಗಳಿಗೆ ಆಹ್ವಾನವನ್ನು ನೀಡಲಾಗಿದೆ. 4000 ಸಂತರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. 2,೦00ಕ್ಕೂ ಅಧಿಕ ಅತಿಥಿಗಳು ಭಾಗವಹಿಸಲಿದ್ದಾರೆ.

- Advertisement -
spot_img

Latest News

error: Content is protected !!