Tuesday, June 30, 2026
Homeತಾಜಾ ಸುದ್ದಿಕೋರ್ಟ್ ಗೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಾಪಾಸ್ ಪಡೆದ ದರ್ಶನ್ ಪರ ವಕೀಲರು

ಕೋರ್ಟ್ ಗೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಾಪಾಸ್ ಪಡೆದ ದರ್ಶನ್ ಪರ ವಕೀಲರು

- Advertisement -
- Advertisement -

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಮನೆಯೂಟಕ್ಕೆ ಅವಕಾಶ ಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ದರ್ಶನ್ ಪರ ವಕೀಲರು ವಾಪಾಸ್ ಪಡೆದಿದ್ದಾರೆ.

ತಮ್ಮ ಪರ ವಕೀಲರ ಮೂಲಕ ಜೈಲು ಊಟ ಬೇಡ, ಮನೆಯೂಟಕ್ಕೆ ಅವಕಾಶ ಮಾಡಿ ಅಂತಾ ಆರಂಭದಲ್ಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ರು. ಆ ಅರ್ಜಿಯನ್ನು ವಿಚಾರಣೆ ಮ್ಯಾಜಿಸ್ಟ್ರೇಟ್ ಅರ್ಜಿಯನ್ನು ವಜಾಗೊಳಿಸಿತ್ತು. ಹಾಗಾಗಿ ಮತ್ತೆ ಹೈಕೋರ್ಟ್ ಗೆ ದರ್ಶನ್ ಪರ ವಕೀಲರು ಅರ್ಜಿಯನ್ನು ಸಲ್ಲಿಸಿದ್ದರು. ಇಂದು ಆ ಅರ್ಜಿಯನ್ನು ದರ್ಶನ್ ಪರ ವಕೀಲರು ವಾಪಾಸ್ ಪಡೆದಿದ್ದಾರೆ.

ತಾಂತ್ರಿಕ ಕಾರಣದಿಂದಾಗಿ ನಟ ದರ್ಶನ್ ಪರ ವಕೀಲ ಅರುಣ್ ಅವರು ಮನೆ ಊಟ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ವಾಪಾಸ್ ಪಡೆದಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!