Sunday, June 7, 2026
Homeಕ್ರೀಡೆBREAKING: ರಸ್ತೆ ಅಪಘಾತದಲ್ಲಿ ಕ್ರಿಕೆಟಿಗ ಸಾವು

BREAKING: ರಸ್ತೆ ಅಪಘಾತದಲ್ಲಿ ಕ್ರಿಕೆಟಿಗ ಸಾವು

- Advertisement -
- Advertisement -

ಕಾಬೂಲ್: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಫ್ಘಾನಿಸ್ತಾನದ ಕ್ರಿಕೆಟ್ ಆಟಗಾರ ನಜೀಬ್ ತರಕಾಯ್ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಕಳೆದ ಶುಕ್ರವಾರ ನಜೀಬ್ ಅವರು ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಜಲಾಲಬಾದ್ ನ ಪೂರ್ಣ ನಂಗಹಾರ್ನಲ್ಲಿ ರಸ್ತೆ ಅಪಘಾತ ನಡೆದಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ನಜೀಬ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ನಜೀಬ್ ತರಕಾಯ್ ಅಫ್ಘಾನಿಸ್ಥಾನದ ಪರ 12 ಟಿ20 ಮತ್ತು ಒಂದು ಅಂತಾರಾಷ್ಟ್ರೀಯ ಏಕದಿನ ಪಂದ್ಯವನ್ನು ಆಡಿದ್ದರು. 2014ರಲ್ಲಿ ಬಾಂಗ್ಲಾದೇಶದಲ್ಲಿ ನಡೆದಿದ್ದ ಟಿ20 ವಿಶ್ವಕಪ್ ನಲ್ಲಿ ನಜೀಬ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು.

- Advertisement -

Latest News

error: Content is protected !!