Wednesday, June 24, 2026
Homeತಾಜಾ ಸುದ್ದಿಶಾಸಕ ಜನಾರ್ದನ ರೆಡ್ಡಿ ಅವರಿಗೆ ಗುಡ್ ನ್ಯೂಸ್ ಕೊಟ್ಟ ಸುಪ್ರೀಂ ಕೋರ್ಟ್; 14 ವರ್ಷಗಳ ಬಳಿಕ...

ಶಾಸಕ ಜನಾರ್ದನ ರೆಡ್ಡಿ ಅವರಿಗೆ ಗುಡ್ ನ್ಯೂಸ್ ಕೊಟ್ಟ ಸುಪ್ರೀಂ ಕೋರ್ಟ್; 14 ವರ್ಷಗಳ ಬಳಿಕ ಬಳ್ಳಾರಿ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವು

- Advertisement -
- Advertisement -

ಬಳ್ಳಾರಿ : ಶಾಸಕ ಜನಾರ್ದನ ರೆಡ್ಡಿ ಅವರಿಗೆ ಸುಪ್ರೀಂ ಕೋರ್ಟ್ ಗುಡ್ ನ್ಯೂಸ್ ವೊಂದನ್ನು ಕೊಟ್ಟಿದೆ. 14 ವರ್ಷಗಳ ಬಳಿಕ ಬಳ್ಳಾರಿ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿದೆ..ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ವಿಶೇಷ ಕೋರ್ಟ್‌ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿತ್ತು.

ಹಲವು ಬಾರಿ ಕೋರ್ಟ್‌ ಅವಕಾಶ ಕೇಳಿ ಸಲ್ಲಿಸಿದ್ದ ಮನವಿಯನ್ನು ತಳ್ಳಿ ಹಾಕಿತ್ತು. ಬಳ್ಳಾರಿಗೆ ಯಾವುದೇ ಪೂರ್ವಾನುಮತಿ ಇಲ್ಲದೆ ಬಳ್ಳಾರಿಗೆ ಹೋಗಲು ಅವಕಾಶ ನೀಡುವಂತೆ ಜನಾರ್ದನ ರೆಡ್ಡಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಬಳ್ಳಾರಿಗೆ ಹೋಗಲು ಇದ್ದ ನಿರ್ಬಂಧವನ್ನು ತೆರವುಗೊಳಿಸಿ ಆದೇಶ ಹೊರಡಿಸಿದೆ.

ಇನ್ನು ಅಕ್ಟೋಬರ್ 3 ಅಂದರೆ  ಗುರುವಾರ ಬೆಳಿಗ್ಗೆ ಬಳ್ಳಾರಿಗೆ ಭೇಟಿ ಕೊಡಲಿದ್ದೇನೆ ಎಂದು ಶಾಸಕ ಮತ್ತು ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಿಳಿಸಿದ್ದಾರೆ. ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 14 ವರ್ಷಗಳ ನಂತರ ಬಳ್ಳಾರಿಗೆ ತೆರಳಲು ಅನುಮತಿ ನೀಡಿ ಸುಪ್ರೀಂ ಕೋರ್ಟ್ ಆದೇಶ ಬಂದಿದೆ.ಕೊನೆಯ ಉಸಿರು ಇರುವವರೆಗೂ ಬಳ್ಳಾರಿಯಲ್ಲಿ ಇರುತ್ತೇನೆ ಎಂದು ಭಾವುಕರಾಗಿ ನುಡಿದರು. ಬಳ್ಳಾರಿಯಲ್ಲಿ ವಿವಿಧ ಪ್ರಮುಖ ದೇವಸ್ಥಾನಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸುವುದಾಗಿ ಹೇಳಿದ್ದಾರೆ.

- Advertisement -

Latest News

error: Content is protected !!