Friday, December 6, 2024
Homeಕರಾವಳಿಉಡುಪಿಉಡುಪಿ; ಪತ್ನಿ ಹಾಗೂ ಮಗುವನ್ನು ಕೊಂದು ಯುವಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಉಡುಪಿ; ಪತ್ನಿ ಹಾಗೂ ಮಗುವನ್ನು ಕೊಂದು ಯುವಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

spot_img
- Advertisement -
- Advertisement -

ಉಡುಪಿ; ಪತ್ನಿ ಹಾಗೂ ಮಗುವನ್ನು ಕೊಂದು ಯುವಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ಳಾಯರು ರೈಲ್ವೇ ಹಳಿಯಲ್ಲಿ ನಡೆದಿದೆ. ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್(32) ಮೃತ ಯುವಕ.

 ಕಾರ್ತಿಕ್ ಶುಕ್ರವಾರ ಮಧ್ಯಾಹ್ನ ಯವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಬಳಿಕ ಪೊಲೀಸರು ಕಾರ್ತಿಕ ವಾಸ ಮಾಡುತ್ತಿದ್ದ ಫ್ಲ್ಯಾಟ್ ಗೆ ತೆರಳಿ ನೋಡಿದಾಗ ಶಾಕ್ ಆಗಿದ್ದಾರೆ.  ಅಲ್ಲಿ ಕಾರ್ತಿಕ್ ಪತ್ನಿ ಪ್ರಿಯಾಂಕ ((28) ಮಗು ಹೃದಯ್ (4) ಶವ ಪತ್ತೆಯಾಗಿದೆ. ಮೂರು ದಿನಗಳಿಂದ ಬಾಗಿಲು ಮುಚ್ಚಿದ್ದು ಪತ್ನಿ ಮಗುವನ್ನು ಕೊಂದು ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.  

ಪಕ್ಷಿಕೆರೆ ಜಂಕ್ಷನ್ ನಲ್ಲಿ “ಹೋಟೆಲ್ ಕಾರ್ತಿಕ್” ನಡೆಸುತ್ತಿರುವ ಜನಾರ್ಧನ ಭಟ್ ಎಂಬವರ ಮೂವರು ಮಕ್ಕಳಲ್ಲಿ ಒಬ್ಬನಾದ ಕಾರ್ತಿಕ್ ಕದ್ರಿಯ ಸೊಸೈಟಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಶುಕ್ರವಾರ ಮಧ್ಯಾಹ್ನ ತನ್ನ ಸ್ಕೂಟರ್ ಅನ್ನು ಕಲ್ಲಾಪು ದೇವಸ್ಥಾನ ಬಳಿ ನಿಲ್ಲಿಸಿ ರೈಲು ಹಳಿಯಲ್ಲಿ ಹೋಗಿದ್ದು ಬಳಿಕ ಛಿದ್ರಗೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಮೂಲ್ಕಿ ಠಾಣಾ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದ, ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.

- Advertisement -
spot_img

Latest News

error: Content is protected !!