Monday, May 6, 2024
Homeಕರಾವಳಿಉಡುಪಿಹಿರಿಯಡ್ಕ: ಸತತ ಹತ್ತು ಗಂಟೆ ಕಾರ್ಯಾಚರಣೆ ಬಳಿಕ ಕೊನೆಗೂ ಚಿರತೆ ಸೆರೆ

ಹಿರಿಯಡ್ಕ: ಸತತ ಹತ್ತು ಗಂಟೆ ಕಾರ್ಯಾಚರಣೆ ಬಳಿಕ ಕೊನೆಗೂ ಚಿರತೆ ಸೆರೆ

spot_img
- Advertisement -
- Advertisement -

ಹಿರಿಯಡ್ಕ: ಪಾಳುಬಿದ್ದ ಮನೆಯೊಂದರಲ್ಲಿ ಅವಿತು ಕುಳಿತಿದ್ದ ಚಿರತೆಯನ್ನು ಸತತ ಹತ್ತು ಗಂಟೆ ಕಾರ್ಯಾಚರಣೆ ನಡೆಸಿ ಕೊನೆಗೂ ಸೆರೆಹಿಡಿದ ಘಟನೆ ಹಿರಿಯಡ್ಕದಲ್ಲಿ ನಡೆದಿದೆ.

ಬೆಳಿಗ್ಗೆಯಿಂದ ಸ್ಥಳದಲ್ಲಿ ಜಮಾಯಿಸಿದ ಅರಣ್ಯಾಧಿಕಾರಿಗಳು ಮತ್ತು ಸ್ಥಳೀಯರು ಈ ಕಾರ್ಯಾಚರಣೆಗೆ ಸಾಕ್ಷಿಯಾದರು.  ಅರವಳಿಕೆ ತಜ್ಞರು ಸ್ಥಳಕ್ಕೆ ಬಂದು ಚಿರತೆಗೆ ಚುಚ್ಚುಮದ್ದು ಹಾಕಲು ನಡೆಸಿದ ಒಂದೆರಡು ಪ್ರಯತ್ನಗಳು ವಿಫಲವಾದವು. ಸಂಜೆಯ ವೇಳೆಗೆ ಕೊನೆಗೂ ಚಿರತೆಗೆ ಚುಚ್ಚುಮದ್ದು ನೀಡಿ ಪ್ರಜ್ಞೆ ತಪ್ಪಿಸುವಲ್ಲಿ ಅರಣ್ಯ ಅಧಿಕಾರಿಗಳು ಯಶಸ್ವಿಯಾದರು. ಐದಾರು ದಿನಗಳ ಮುಂಚೆ ಈ ಮನೆಯೊಳಗೆ ಚಿರತೆ ನುಗ್ಗಿರುವ ಸಾಧ್ಯತೆ ಇದೆ. ಅದೃಷ್ಟವಶಾತ್ ಈ ಮನೆಯಲ್ಲಿ ಯಾರು ವಾಸವಿಲ್ಲದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.

- Advertisement -
spot_img

Latest News

error: Content is protected !!