Saturday, June 6, 2026
Homeತಾಜಾ ಸುದ್ದಿಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತೆ ಆಸ್ಪತ್ರೆಗೆ ದಾಖಲು

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತೆ ಆಸ್ಪತ್ರೆಗೆ ದಾಖಲು

- Advertisement -
- Advertisement -

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋವಿಡ್ ಸೋಂಕಿನಿಂದ ಗುಣಮುಖಗೊಂಡಿದ್ದ ಅವರು ಆಗಸ್ಟ್ 31ರಂದು ಡಿಸ್ಚಾರ್ಜ್ ಆಗಿದ್ದರು.

ಜ್ವರ ಮತ್ತು ಕಫದ ಕಾರಣ ಡಿ.ಕೆ.ಶಿವಕುಮಾರ್ ಜಯನಗರದಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಗಸ್ಟ್ 31ರಂದು ಡಿಸ್ಚಾರ್ಜ್ ಆಗಿದ್ದ ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.ಡಿ. ಕೆ. ಶಿವಕುಮಾರ್‌ಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿತ್ತು. ಆಗಸ್ಟ್ 24ರಂದು ಅವರು ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 31ರಂದು ಅವರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು.

ವೈದ್ಯರ ಸಲಹೆಯಂತೆ ಅವರು ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದರು. ಯಾವುದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರಲಿಲ್ಲ. ಈಗ ಪುನಃ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಪುನಃ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಡಿ. ಕೆ. ಶಿವಕುಮಾರ್ ಅವರ ಆರೋಗ್ಯ ಸುಧಾರಿಸುತ್ತಿದೆ ಎಂದು ವೈದ್ಯರು ಹೇಳಿದ್ದಾರೆ. ಇನ್ನೂ ಎರಡು ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುವ ಸಾಧ್ಯತೆ ಇದೆ. ಡಿ. ಕೆ. ಶಿವಕುಮಾರ್ ಆಸ್ಪತ್ರೆಯಲ್ಲಿದ್ದಾಗ ಅಲ್ಲಿಂದಲೇ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದರು. ಅಭಿಮಾನಿಗಳು, ಕಾರ್ಯಕರ್ತರು ತಮ್ಮನ್ನು ಭೇಡಿ ಮಾಡಲು ಬರಬಾರದು ಎಂದು ಮನವಿ ಮಾಡಿದ್ದರು.

- Advertisement -

Latest News

error: Content is protected !!