Thursday, June 4, 2026
Homeಕರಾವಳಿಕಡಬ; ನಿಲ್ಲದ ಕಾಡಾನೆ ದಾಳಿ; ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರ ಮೇಲೆ ದಾಳಿ

ಕಡಬ; ನಿಲ್ಲದ ಕಾಡಾನೆ ದಾಳಿ; ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರ ಮೇಲೆ ದಾಳಿ

- Advertisement -
- Advertisement -

ಕಡಬದಲ್ಲಿ ಕಾಡಾನೆ ದಾಳಿ ಮತ್ತೆ ಮುಂದುವರೆದಿದೆ. ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ಮಾಡಿದೆ.

ಇಲ್ಲಿನ ಕೊಣಾಜೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ (ಕೆ.ಎಫ್.ಡಿ.ಸಿ) ದ ರಬ್ಬರ್ ತೋಟದಲ್ಲಿ ಶನಿವಾರ ಮುಂಜಾನೆ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಕಾಡಾನೆಗಳು ಬೆನ್ನಟ್ಟಿದ ಘಟನೆ ಇಂದು ನಡೆದಿದೆ.

ಆನೆಗಳ ದಾಳಿಗೆ ಹೆದರಿ ಓಡುವಾಗ ಮೂವರು ಕಾರ್ಮಿಕರು ಬಿದ್ದು ಗಾಯಗೊಂಡಿದ್ದಾರೆ. ರಾಜಗೋಪಾಲ್ (49), ಮೇಸ್ತ್ರಿಗಳಾದ ನಾಗಪ್ಪ (53) ಹಾಗೂ ಶಿವರಾಜ್ (43) ಗಾಯಗೊಂಡವರು. ಗಾಯಾಳುಗಳನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ.

ಕಾರ್ಮಿಕರು ತೋಟದಲ್ಲಿ ಕೆಲಸ ನಿರತರಾಗಿದ್ದಾಗ ಏಕಾಏಕಿ ಆನೆಗಳು ದಾಳಿಗೆ ಮುಂದಾಗಿವೆ. ಭಯಭೀತಗೊಂಡು ಓಡಿ ತಪ್ಪಿಸಿಕೊಳ್ಳುವ ವೇಳೆ ಬಿದ್ದು ಗಾಯಗೊಂಡೆವು ಗಾಯಾಳುಗಳು ತಿಳಿಸಿದ್ದಾರೆ. ಮಾಹಿತಿ ತಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ..

- Advertisement -

Latest News

error: Content is protected !!