Thursday, June 4, 2026
Homeತಾಜಾ ಸುದ್ದಿರಾಜ್ಯದಲ್ಲಿ ಮತ್ತೆ ಲಾಕ್‌ಡೌನ್, ಸುಳಿವು ಕೊಟ್ಟ ಸಚಿವ ಶ್ರೀರಾಮುಲು

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್, ಸುಳಿವು ಕೊಟ್ಟ ಸಚಿವ ಶ್ರೀರಾಮುಲು

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದು ಮತ್ತು ಸೋಂಕು ನಿಯಂತ್ರಣಕ್ಕೆ ಬರದೇ ಇರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಲಾಕ್‍ಡೌನ್ ಮಾಡುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ.

ನಗರದ ಕೆ.ಸಿ.ಜನರಲ್ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯವನ್ನು ಮತ್ತೊಮ್ಮೆ ಲಾಕ್‍ಡೌನ್ ಮಾಡಬೇಕು ಎಂಬ ಸಲಹೆಗಳು ಕೇಳಿ ಬಂದಿವೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ ಚರ್ಚೆ ಮಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

ಈಗಾಗಲೇ ಈ ಕುರಿತು ಚರ್ಚೆಗಳು ಆರಂಭಗೊಂಡಿದ್ದು, ಬೆಂಗಳೂರಿನಲ್ಲಿ ಕೆಲವು ಕ್ಷೇತ್ರಗಳಲ್ಲಿ ಲಾಕ್‍ಡೌನ್ ನಿಯಮಾವಳಿಗಳನ್ನು ಬಿಗಿಗೊಳಿಸಲಾಗಿದೆ. ರಾಜ್ಯಾದ್ಯಂತ ಇದೇ ರೀತಿ ಲಾಕ್‍ಡೌನ್ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

- Advertisement -

Latest News

error: Content is protected !!