Thursday, June 4, 2026
Homeತಾಜಾ ಸುದ್ದಿಮುರುಘಾ ಶ್ರೀಗಳಿಗೆ ಇಂದೂ ಸಿಗದ ಜಾಮೀನು: ವಿಚಾರಣೆ ನಾಳೆಗೆ ಮುಂದೂಡಿದ ಕೋರ್ಟ್

ಮುರುಘಾ ಶ್ರೀಗಳಿಗೆ ಇಂದೂ ಸಿಗದ ಜಾಮೀನು: ವಿಚಾರಣೆ ನಾಳೆಗೆ ಮುಂದೂಡಿದ ಕೋರ್ಟ್

- Advertisement -
- Advertisement -

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿರುವ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಕೋರ್ಟ್ ಮುಂದೂಡಿಕೆಯಾಗಿದೆ. ಹೀಗಾಗಿ ಇಂದು ಕೂಡ ಜಾಮೀನು ದೊರೆಯದೇ ಜೈಲೇ ಗತಿ ಎನ್ನುವಂತೆ ಆಗಿದೆ.

ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪದಡಿಯಲ್ಲಿ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಲ್ಲದೇ ಇದೇ ಪ್ರಕರಣದಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಶ್ರೀಗಳ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.

ಈಗಾಗಲೇ ಜಾಮೀನು ಅರ್ಜಿಯ ವಿಚಾರಣೆ ಕೈಗೊಂಡಿದ್ದಂತ ಚಿತ್ರದುರ್ಗ ಜಿಲ್ಲಾ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿ, ಮುಂದೂಡಿಕೆ ಮಾಡಿತ್ತು.ಇಂದು ಮತ್ತೆ ಜಾಮೀನು ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠವು, ಮುರುಘಾ ಶ್ರೀಗಳು, 2ನೇ ಆರೋಪಿ ಲೇಡಿ ವಾರ್ಡನ್ ಅವರ ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಿಕೆ ಮಾಡಲಾಗಿದೆ.

- Advertisement -

Latest News

error: Content is protected !!