Thursday, June 4, 2026
Homeತಾಜಾ ಸುದ್ದಿಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೊಮ್ಮೆ ಕೋವಿಡ್ ಸೋಂಕು

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೊಮ್ಮೆ ಕೋವಿಡ್ ಸೋಂಕು

- Advertisement -
- Advertisement -

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೊಮ್ಮೆ ಕೋವಿಡ್ ದೃಢಪಟ್ಟಿದೆ. ಹಾಗಾಗಿ, ಅವರು ಪ್ರತ್ಯೇಕವಾಸದಲ್ಲಿದ್ದಾರೆ. ಇತ್ತೀಚೆಗೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೂ ಕೋವಿಡ್ ದೃಢಪಟ್ಟಿತ್ತು.

‘ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಕೋವಿಡ್ ದೃಢಪಟ್ಟಿದೆ. ಸರ್ಕಾರದ ಕೋವಿಡ್ ಮಾರ್ಗಸೂಚಿಗಳ ಅನ್ವಯ ಅವರು, ಪ್ರತ್ಯೇಕವಾಸದಲ್ಲಿದ್ದಾರೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಜೂನ್ ತಿಂಗಳಲ್ಲೂ ಸಹ ಸೋನಿಯಾ ಗಾಂಧಿಯವರಿಗೆ ಕೋವಿಡ್ ದೃಢಪಟ್ಟಿತ್ತು. ಬಳಿಕ, 75 ವರ್ಷದ ಕಾಂಗ್ರೆಸ್ ನಾಯಕಿ, ಜೂನ್ 12ರಂದು ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಜೂನ್ 20ಕ್ಕೆ ಬಿಡುಗಡೆಯಾಗಿದ್ದರು.

.

- Advertisement -

Latest News

error: Content is protected !!