Tuesday, May 7, 2024
Homeಕರಾವಳಿಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡಿನಲ್ಲಿ ಗುಡ್ಡ ಕುಸಿತ ಆತಂಕ: ಮತ್ತೆರಡು ದಿನ ರಾತ್ರಿ ವೇಳೆ...

ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡಿನಲ್ಲಿ ಗುಡ್ಡ ಕುಸಿತ ಆತಂಕ: ಮತ್ತೆರಡು ದಿನ ರಾತ್ರಿ ವೇಳೆ ವಾಹನ ಸಂಚಾರ ನಿರ್ಬಂಧ

spot_img
- Advertisement -
- Advertisement -

ಕೊಡಗು: ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಗ್ರಾಮದ ಗುಡ್ಡ ಪ್ರದೇಶದಲ್ಲಿ ಭಾರೀ ಬಿರುಕುಗಳು ಕಾಣಿಸಿಕೊಂಡಿದ್ದು, ಗುಡ್ಡ ಕುಸಿಯುವ ಆತಂಕ ಹಿನ್ನೆಲೆ ಮತ್ತೆರಡು ದಿನ ರಾತ್ರಿ ವೇಳೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಮಡಿಕೇರಿ- ಸಂಪಾಜೆ ರಸ್ತೆಯಲ್ಲಿ ಆ.10 ರಾತ್ರಿಯಿಂದ ಆ.12 ರ ಬೆಳಗ್ಗೆ 6.30 ರವರೆಗೆ ರಾತ್ರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

2018ನೇ ಸಾಲಿನಲ್ಲಿ ಈಗ ಬಿರುಕು ಬಿಟ್ಟಿರುವ ಬೆಟ್ಟ ಪ್ರದೇಶದಲ್ಲೆ ಭಾರೀ ಪ್ರಮಾಣದ ಭೂ ಕುಸಿತವುಂಟಾಗಿ, ರಾಷ್ಟ್ರೀಯ ಹೆದ್ದಾರಿ ಕುಸಿದು ಸಂಪರ್ಕ ಕಡಿತಗೊಂಡಿತ್ತು.ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಎರಡು ದಿನ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಲಾಗಿದೆ.

- Advertisement -
spot_img

Latest News

error: Content is protected !!