Wednesday, July 8, 2026
Homeಕರಾವಳಿಕಡಬದಲ್ಲಿ ಮತ್ತೆ ಆತಂಕ ಮೂಡಿಸಿದ ಕಾಡಾನೆ;  ತೋಟಕ್ಕೆ ನೀರು ಹಾಕಲು ಹೋದ ವ್ಯಕ್ತಿಯನ್ನು ಅಟ್ಟಾಡಿಸಿದ ಪುಂಡಾನೆ

ಕಡಬದಲ್ಲಿ ಮತ್ತೆ ಆತಂಕ ಮೂಡಿಸಿದ ಕಾಡಾನೆ;  ತೋಟಕ್ಕೆ ನೀರು ಹಾಕಲು ಹೋದ ವ್ಯಕ್ತಿಯನ್ನು ಅಟ್ಟಾಡಿಸಿದ ಪುಂಡಾನೆ

- Advertisement -
- Advertisement -

ಕಡಬ; ನಿನ್ನೆ ಮರ್ಧಾಳ ಸಮೀಪದ ನೈಲ ಎಂಬಲ್ಲಿ ಕಾಡಾನೆ ಎಂಬಲ್ಲಿ ಇಬ್ಬರನ್ನು ಬಲಿ ಪಡೆದ ಬೆನ್ನಲ್ಲೇ ಇಂದು(ಮಂಗಳವಾರ) ಮತ್ತೊಂದೆಡೆ ಆನೆ ವ್ಯಕ್ತಿಯೊಬ್ಬರನ್ನು ಅಟ್ಟಾಡಿಸಿ ಆತಂಕ ಮೂಡಿಸಿದೆ.

ಇಂದು ಬೆಳಗಿನ ಜಾವ ಕಡಬ ತಾಲೂಕಿನ ಕೊಂಬಾರು ಗ್ರಾಮದ ಪೆರುಂದೋಡಿ ಎಂಬಲ್ಲಿ ಕೃಷಿಕರೋರ್ವರನ್ನು ಕಾಡಾನೆ ಬೆನ್ನಟ್ಟಿದೆ. ಕೊಂಬಾರು ಪರಿಸರದಲ್ಲಿ ಕಾಡಾನೆಯು ಕೃಷಿ ತೋಟಗಳಿಗೆ ಲಗ್ಗೆ ಇಟ್ಟಿದ್ದು, ಅಪಾರ ಕೃಷಿಯನ್ನು ಹಾನಿ ಮಾಡಿದೆ. ಪೆರುಂದೋಡಿ ನಿವಾಸಿ ಮೋಹನ್ ಎಂಬವರು ಮಂಗಳವಾರ ಬೆಳಿಗ್ಗೆ 3.30ರ ಸುಮಾರಿಗೆ ನೀರು ಹಾಕಲು ತನ್ನ ತೋಟಕ್ಕೆ ತೆರಳಿದ್ದ ವೇಳೆ ಕಾಡಾನೆಯೊಂದು ಬೆನ್ನಟ್ಟಿದ್ದು, ಅದೃಷ್ಟವಶಾತ್ ಓಡಿ ತಪ್ಪಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಮೀಪದ ಮಣಿಬಾಂಡ ಕಟ್ಟೆ ನಿವಾಸಿ ದೇವರಾಜ್ ಎಂಬವರ ಕೃಷಿ ತೋಟಕ್ಕೆ ಭಾಗಶಃ ಹಾನಿಯಾಗಿದ್ದು, ಕಟ್ಟೆ, ಪೆರುಂದೋಡಿ ಪರಿಸರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

- Advertisement -

Latest News

error: Content is protected !!