Wednesday, June 3, 2026
Homeತಾಜಾ ಸುದ್ದಿವಿಧಾನ ಪರಿಷತ್ತಿನ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ

ವಿಧಾನ ಪರಿಷತ್ತಿನ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ

- Advertisement -
- Advertisement -

ಬೆಂಗಳೂರು: ವಿಧಾನ ಪರಿಷತ್ತಿನ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಜಗದೀಶ್ ಶೆಟ್ಟರ್ ಸ್ಪರ್ಧೆ ಮಾಡಲಿದ್ದಾರೆ.ಜೂನ್.30ರಂದು ನಡೆಯಲಿರುವ ವಿಧಾನಪರಿಷತ್ತಿನ ಮೂರು ಸ್ಥಾನಗಳ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಮೂವರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಅದರಂತೆ  ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರ್ ಹಾಗೂ ಎನ್ ಎಸ್ ಬೋಸೆರಾಜು ಅವರು ಸ್ಪರ್ಧಿಸಲಿದ್ದಾರೆ.

ಇಂದು ವಿಧಾನ ಪರಿಷತ್ ಉಪ ಚುನಾವಣೆಗೆ ಕೊನೆಯ ದಿನವಾದ ಕಾರಣ ಕಾಂಗ್ರೆಸ್ ಪಕ್ಷದಿಂದ ಈ ಮೂವರು ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಲಿದ್ದಾರೆ.

ಜೂನ್.21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂನ್.23ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್. 30ರಂದು ಮತದಾನವನ್ನು ನಿಗದಿ ಪಡಿಸಲಾಗಿದೆ. ಜೂನ್.30ರಂದು ಬೆಳಿಗ್ಗೆ 9 ರಿಂದ 4 ಗಂಟೆಯವರೆಗೆ ನಡೆಸಲಾಗುತ್ತದೆ. ಸಂಜೆ 5 ಗಂಟೆಗೆ ಮತಗಳ ಏಣಿಕೆ ಕಾರ್ಯ ನಡೆದು, ಫಲಿತಾಂಶ ಅಂದೇ ಘೋಷಣೆಯಾಗಲಿದೆ.

- Advertisement -

Latest News

error: Content is protected !!