Friday, May 3, 2024
Homeಕರಾವಳಿಉಡುಪಿಹಿಜಾಬ್ ವಿವಾದ - ಸಾಮಾಜಿಕ ಜಾಲತಾಣಗಳಲ್ಲಿ ಧರಣಿ ನಿರತ ವಿದ್ಯಾರ್ಥಿಗಳ ವೈಯಕ್ತಿಕ ಮಾಹಿತಿ ವೈರಲ್...

ಹಿಜಾಬ್ ವಿವಾದ – ಸಾಮಾಜಿಕ ಜಾಲತಾಣಗಳಲ್ಲಿ ಧರಣಿ ನಿರತ ವಿದ್ಯಾರ್ಥಿಗಳ ವೈಯಕ್ತಿಕ ಮಾಹಿತಿ ವೈರಲ್ – ಪೋಷಕರ ದೂರು

spot_img
- Advertisement -
- Advertisement -

ಉಡುಪಿ: ತರಗತಿಯೊಳಗೆ ಹಿಜಾಬ್‌ನ ಹಕ್ಕಿಗಾಗಿ ಪ್ರತಿಭಟನೆ ನಡೆಸುತ್ತಿರುವ ಆರು ವಿದ್ಯಾರ್ಥಿಗಳ ಪೋಷಕರು, ತಮ್ಮ ಹುಡುಗಿಯರ ಮೊಬೈಲ್ ಸಂಖ್ಯೆ ಸೇರಿದಂತೆ ವೈಯಕ್ತಿಕ ವಿವರಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವುದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯನ್ನು ಸಂಪರ್ಕಿಸಿದ್ದಾರೆ.

ಎಸ್ಪಿ ಎನ್ ವಿಷ್ಣುವರ್ಧನ್ ಅವರನ್ನು ಭೇಟಿಯಾದ ಪೋಷಕರು ಸಾಮಾಜಿಕ ಜಾಲತಾಣಗಳಲ್ಲಿ ಧರಣಿ ನಿರತ ವಿದ್ಯಾರ್ಥಿಗಳ ವೈಯಕ್ತಿಕ ವಿವರಗಳನ್ನು ಪ್ರಸಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಧರಣಿ ನಿರತ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆ, ವಿಳಾಸ ಹಾಗೂ ಇತರೆ ವೈಯಕ್ತಿಕ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಆನ್‌ಲೈನ್‌ನಲ್ಲಿ ಲಭ್ಯವಿರುವ ಮಾಹಿತಿಯನ್ನು ಬಳಸಿಕೊಂಡು ದುಷ್ಕರ್ಮಿಗಳು ಬೆದರಿಕೆ ಹಾಕುವ ಬಗ್ಗೆ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಎಸ್ಪಿ ವಿಷ್ಣುವರ್ಧನ್ ಮಾತನಾಡಿ, ”ಸರಕಾರಿ ಮಹಿಳಾ ಪಿಯು ಕಾಲೇಜಿನ ಧರಣಿ ನಿರತ ವಿದ್ಯಾರ್ಥಿನಿಯರ ಪೋಷಕರು ನನ್ನನ್ನು ಸಂಪರ್ಕಿಸಿ ಲಿಖಿತ ದೂರು ನೀಡಿದ್ದಾರೆ. ಆನ್‌ಲೈನ್‌ನಲ್ಲಿ ಲಭ್ಯವಿರುವ ಮಾಹಿತಿಯ ದಾಖಲೆಗಳನ್ನು ಸಲ್ಲಿಸುವಂತೆ ನಾನು ಅವರಿಗೆ ಮನವಿ ಮಾಡಿದ್ದೇನೆ. ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

- Advertisement -
spot_img

Latest News

error: Content is protected !!