Saturday, June 6, 2026
Homeಕರಾವಳಿಉಡುಪಿಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ, ಪ್ರಯಾಣಿಕರಿಗೆ ಗುಡ್ ನ್ಯೂಸ್

ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ, ಪ್ರಯಾಣಿಕರಿಗೆ ಗುಡ್ ನ್ಯೂಸ್

- Advertisement -
- Advertisement -

ಉಡುಪಿ: ಪ್ರಸ್ತುತ ಮಳೆ ಪ್ರಮಾಣ ಕಡಿಮೆ ಇರುವುದರಿಂದ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಜಿಲ್ಲಾಧಿಕಾರಿ ಆದೇಶಿಸಿರುತ್ತಾರೆ.

ರಾಷ್ಟ್ರೀಯ ಹೆದ್ದಾರಿ-169ಎ ಯ ತೀರ್ಥಹಳ್ಳಿ- ಉಡುಪಿ- ಮಂಗಳೂರು ರಸ್ತೆಯ ಆಗುಂಬೆ ಘಾಟಿಯಲ್ಲಿ ಸದ್ಯ ಮಳೆಗಾಲದ ಮಳೆ ಕಡಿಮೆ ಇರುವುದರಿಂದ ಮಳೆ ಹೆಚ್ಚಾಗುವವರೆಗೆ, ಭಾರಿ ವಾಹನ ಸಂಚಾರವನ್ನು ನಿಷೇಧಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ಕಲ್ಪಿಸಿ ಹೊರಡಿಸಿರುವ ಆದೇಶವನ್ನು ತಾತ್ಕಾಲಿಕವಾಗಿ ತಡೆ ಹಿಡಿದು ಭಾರಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.

- Advertisement -

Latest News

error: Content is protected !!