Friday, April 26, 2024
Homeಕರಾವಳಿಉಡುಪಿಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

spot_img
- Advertisement -
- Advertisement -

ಉಡುಪಿ: ಆಗುಂಭೆ ಘಾಟಿನಲ್ಲಿ ಅಕ್ಟೋಬರ್ 1 ರವರೆಗ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 169ಎಯಲ್ಲಿ ತೀರ್ಥಹಳ್ಳಿ- ಉಡುಪಿ ರಸ್ತೆಯ ಆಗುಂಬೆ ಘಾಟಿ ರಸ್ತೆಯು ಕಿರಿದಾಗಿದ್ದು, ಮಳೆಗಾಲದಲ್ಲಿ ಭಾರಿ ಸರಕು ಸಾಗಾಣೆ ವಾಹನಗಳು ಸಂಚರಿಸುವುದರಿಂದ ರಸ್ತೆ ಬದಿಯ ಮಣ್ಣು ಕುಸಿದು, ಸುಗಮ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ರಾಜ್ಯ ಮೋಟಾರು ವಾಹನಗಳ ನಿಯಮ 1989 ಕಲಂ 221(ಎ)(2) (5) ರನ್ವಯ ರಾಷ್ಟ್ರೀಯ ಹೆದ್ದಾರಿ 169 ಎ ರಸ್ತೆಯ ಆಗುಂಬೆ ಘಾಟಿಯಲ್ಲಿ ಅಕ್ಟೋಬರ್ 15ರವರೆಗೆ 12 ಟನ್‌ಗಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.

ಬದಲಿ ಮಾರ್ಗದ ವಿವರ:
ಉಡುಪಿ – ಸಿದ್ದಾಪುರ – ಹೊಸಂಗಡಿ – ಬಾಳೆಬರೇ ಘಾಟ್ ಹುಲಿಕಲ್- ಮಾಸ್ತಿಕಟ್ಟೆ- ತೀರ್ಥಹಳ್ಳಿ ಮಾರ್ಗವಾಗಿ ಶಿವಮೊಗ್ಗಕ್ಕೆ ಹಾಗೂ ಮಂಗಳೂರು-ಕಾರ್ಕಳ-ಹೆಬ್ರಿ-ಸಿದ್ಧಾಪುರ-ಹೊಸಂಗಡಿ-ಬಾಳೆಬರೇ ಘಾಟ್ -ಹುಲಿಕಲ್-ಮಾಸ್ತಿಕಟ್ಟೆ-ತೀರ್ಥಹಳ್ಳಿ-ಮಾರ್ಗವಾಗಿ ಶಿವಮೊಗ್ಗ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

- Advertisement -
spot_img

Latest News

error: Content is protected !!