- Advertisement -
- Advertisement -
ಗುಜರಾತ್‌ನ ಅಹಮದಾಬಾದ್‌ನಲ್ಲಿ ಮಧ್ಯಾಹ್ನ ಏರ್ ಇಂಡಿಯಾ ವಿಮಾನ ಅಪಘಾತವಾಗಿದೆ. 100 ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅಹಮದಾಬಾದ್‌ನ ಮೇಘನಿನಗರ ಪ್ರದೇಶದಲ್ಲಿ ಅನಾಹುತ ಸಂಭವಿಸಿದೆ.
242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನವು ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಆಗುತ್ತಿರುವಾಗ ಅಪಘಾತಕ್ಕೀಡಾಗಿದೆ. ಏಳು ಅಗ್ನಿಶಾಮಕ ದಳದ ವಾಹನಗಳು ಸ್ಥಳದಲ್ಲಿವೆ. ಹಾನಿಯ ವ್ಯಾಪ್ತಿಯನ್ನು ತೋರಿಸುವ ದೃಶ್ಯಗಳು ಹೊರಬಿದ್ದಿದ್ದು, ಗಾಢ ಹೊಗೆ ಆವರಿಸಿದೆ. ಅಹಮದಾಬಾದ್ ವಿಮಾನ ನಿಲ್ದಾಣದಿಂದ ವಿಮಾನ ಹಾರಿದ ಸ್ಪಲ್ಪ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಮಾಹಿತಿಯ ಪ್ರಕಾರ, ಈ ವಿಮಾನ ಅಹಮದಾಬಾದ್‌ನಿಂದ ಲಂಡನ್’ಗೆ ಹೋಗುತ್ತಿದ್ದಾಗ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಹಾರಿದ ಸ್ವಲ್ಪ ಸಮಯದ ನಂತರ ಮೇಘನಿನಗರ ಬಳಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ.
- Advertisement -