Saturday, May 18, 2024
Homeತಾಜಾ ಸುದ್ದಿಹರ್ ಘರ್ ತಿರಂಗ ಅಭಿಯಾನ : ರಾಜ್ಯ‌ ಸರ್ಕಾರದ ಮುಂದೆ 1 ಕೋಟಿ ಮನೆಗಳಲ್ಲಿ ತ್ರಿವರ್ಣ...

ಹರ್ ಘರ್ ತಿರಂಗ ಅಭಿಯಾನ : ರಾಜ್ಯ‌ ಸರ್ಕಾರದ ಮುಂದೆ 1 ಕೋಟಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿ

spot_img
- Advertisement -
- Advertisement -

ಬೆಂಗಳೂರು: ಹರ್ ಘರ್ ತಿರಂಗ ಅಭಿಯಾನದ ಅಂಗವಾಗಿ ರಾಜ್ಯದಲ್ಲಿ 1 ಕೋಟಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಗುರಿಯನ್ನು ರಾಜ್ಯ ಸರ್ಕಾರ ಇರಿಸಿಕೊಂಡಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಸರ್ಕಾರಿ ಕಚೇರಿಗಳಲ್ಲಿ ಆಗಸ್ಟ್ 13 ರಿಂದ 15 ರವರೆಗೆ ಮೂರು ದಿನಗಳಂದು ಪ್ರತಿ ದಿನ ಬೆಳಿಗ್ಗೆ ಧ್ವಜಾರೋಹಣ ಮಾಡಿ, ಸಂಜೆ ಇಳಿಸಬೇಕು.

ಆದರೆ ಮನೆಗಳಲ್ಲಿ ಆಗಸ್ಟ್ 13 ರಂದು ಧ್ವಜಾರೋಹಣ ಮಾಡಿದರೆ, 15ರ ವರೆಗೆ ಇರಿಸಬಹುದಾಗಿದೆ.

ತಿರಂಗ ಅಭಿಯಾನವನ್ನು ರಾಜ್ಯದಲ್ಲಿ ಯಶಸ್ವಿಗೊಳಿಸಲು ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ‌ ರಾಜ್ಯದ ಎಲ್ಲಾ‌ ಜಿಲ್ಲಾಡಳಿತಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ.

ಅಲ್ಲದೇ ರಾಜ್ಯದ ಎಲ್ಲಾ‌ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವಂತೆ ಸೂಚಿಸಲಾಗಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮತ್ತೊಮ್ಮೆ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ, ನಿಗದಿತ ಗುರಿ ಸಾಧಿಸಲು ಜಿಲ್ಲಾಡಳಿತಗಳಿಗೆ ಸೂಚಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ‌ ‌ನಿರ್ದೇಶನ ನೀಡಿದ್ದಾರೆ.

- Advertisement -
spot_img

Latest News

error: Content is protected !!