Wednesday, June 24, 2026
Homeತಾಜಾ ಸುದ್ದಿಸ್ಯಾಂಡಲ್ವುಡ್ ನಶೆಯ ನಂಟು: ಐಂದ್ರಿತಾ ರೇ-ದಿಗಂತ್ ರನ್ನು ವಶಕ್ಕೆ ಪಡೆದ ಸಿಸಿಬಿ

ಸ್ಯಾಂಡಲ್ವುಡ್ ನಶೆಯ ನಂಟು: ಐಂದ್ರಿತಾ ರೇ-ದಿಗಂತ್ ರನ್ನು ವಶಕ್ಕೆ ಪಡೆದ ಸಿಸಿಬಿ

- Advertisement -
- Advertisement -

ಬೆಂಗಳೂರು: ಸ್ಯಾಂಡಲ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟಾರ್ ದಂಪತಿಗಳಾದ ದಿಂಗತ್ ಹಾಗೂ ಐಂದ್ರಿತಾ ರೇ ಯನ್ನು ಸಿಸಿಬಿ ವಶಕ್ಕೆ ಪಡೆದಿದೆ. ಹೌದು,ನಟಿ ರಾಗಿಣಿ , ಸಂಜನಾ ಬಳಿಕ ಇದೀಗ ನಟಿ ಐಂದ್ರಿತಾ ರೇ ಮತ್ತು ನಟ ದಿಗಂತ್​ಗೆ ಸಂಕಷ್ಟಎದುರಾಗಿದೆ. ಸ್ಟಾರ್ ದಂಪತಿಯನ್ನು ಹೆಚ್ಚಿನ ವಿಚಾರಣೆಗೆ ವಶಕ್ಕೆ ಪಡೆದಿದೆ.

ಪಾರ್ಟಿಯಲ್ಲಿ ನಟಿ ರಾಗಿಣಿ, ಸಂಜನಾ ಜೊತೆ ಐಂದ್ರಿತಾ ಕೂಡ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಅದ್ದು, ಈ ಹಿನ್ನೆಲೆ ನಟಿ ಐಂದ್ರಿತಾ ರೇ ಮತ್ತು ನಟ ದಿಗಂತ್​ಗೆ ನೋಟಿಸ್​ ಜಾರಿ ಮಾಡಿತ್ತು. ಬಳಿಕ ವಿಚಾರಣೆಗೆ ಹಾಜರಾದ ದಿಗಂತ್ ಹಾಗೂ ಐಂದ್ರಿತಾ ಅವರನ್ನು ಸಿಸಿಬಿ ವಶಕ್ಕೆ ಪಡೆದಿದೆ.

ಡ್ರಗ್ ಪೆಡ್ಲರ್ ಅನಿಕಾ ನೀಡಿದ ಮಾಹಿತಿ ಆಧರಿಸಿ ನಟ ದಿಗಂತ್ ಹಾಗೂ ಐಂದ್ರಿತಾ ಅವರಿಗೆ ಸಿಸಿಬಿ ನೋಟೀಸ್ ನೀಡಿದೆ. ಅಲ್ಲದೇ ವಿರೇನ್ ಖನ್ನಾ ಹೇಳಿಕೆಯಲ್ಲೂ ಐಂದ್ರಿತಾ ರೈ ಹೆಸರು ಕೇಳಿಬಂದಿತ್ತು. ನೋಟೀಸ್ ನೀಡಿದ್ದ ವೇಳೆ ಸ್ಟಾರ್ ದಂಪತಿಗಳಿಬ್ಬರೂ ಕೇರಳದ ವಯನಾಡ್ ನಲ್ಲಿದ್ದರು. ಹೀಗಾಗಿ ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ್ದರು. ಆದರೆ ಸಿಸಿಬಿ ಅಧಿಕಾರಿಗಳು ಇಂದೇ ವಿಚಾರಣೆಗೆ ಹಾಜರಾಗಬೇಕು ಇಲ್ಲವಾದಲ್ಲಿ ಮನೆ ಮೇಲೆ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಇದೇ ಕಾರಣಕ್ಕೆ ದಂಪತಿಗಳು ಇಂದು ಸಿಸಿಬಿ ವಿಚಾರಣೆಗೆ ಹಾಜರಾದರು.

- Advertisement -

Latest News

error: Content is protected !!