Friday, June 26, 2026
Homeತಾಜಾ ಸುದ್ದಿಶಿವಮೊಗ್ಗ ಡಿಸಿ ಕಚೇರಿ ಮೇಲೆ ಹತ್ತಿ ಆಜಾನ್ ಕೂಗಿದ ಯುವಕ!

ಶಿವಮೊಗ್ಗ ಡಿಸಿ ಕಚೇರಿ ಮೇಲೆ ಹತ್ತಿ ಆಜಾನ್ ಕೂಗಿದ ಯುವಕ!

- Advertisement -
- Advertisement -

ಶಿವಮೊಗ್ಗ: ಜಿಲ್ಲಾಧಿಕಾರಿ ಕಛೇರಿ ಮೇಲೆ ನಿಂತು ಯುವಕನೋರ್ವ ಆಜಾನ್ ಕೂಗಿದ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿಯಲ್ಲಿ ಮೊನ್ನೆ ಈ ಘಟನೆ ನಡೆದಿದೆ.

ಆಜಾನ್ ಹಾಗು ಅಲ್ಲಾಹು ಬಗ್ಗೆ ಮಾಜಿ‌ ಸಚಿವ ಕೆ.ಎಸ್. ಈಶ್ವರಪ್ಪ ಅವಹೇಳನಕಾರಿ ಯಾಗಿ ಮಾತಾಡಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ ನಡೆದಿತ್ತು. ಈಶ್ವರಪ್ಪ ವಿರುದ್ದ ಘೋಷಣೆ ಕೂಗಿ ಮುಸ್ಲಿಂ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಯುವಕನೋರ್ವ ಜಿಲ್ಲಾಧಿಕಾರಿ ಕಚೇರಿ ಮೇಲೆ ಹತ್ತಿ ಆಜಾನ್ ಕೂಗಿದ್ದಾನೆ.

ಜಿಲ್ಲಾಧಿಕಾರಿ ಕಚೇರಿ ಮೇಲೆ ಆಜಾನ್ ಕೂಗದಂತೆ ಸ್ಥಳದಲ್ಲಿದ್ದ ಪೊಲೀಸರು ತಾಕೀತು ಮಾಡಿದ್ದು ಈ ವೇಳೆ ಪೊಲೀಸರು ಮತ್ರು ಮತ್ತು ಪ್ರತಿಭಟನಾಕಾರರ ನಡುವೆ ಮಾತುನ ಮಾತಿನ ಚಕಮಕಿ ನಡೆದಿದೆ.

ನಂತರ ಡಿಸಿ ಕಚೇರಿ ಮೇಲೆ ಆಜಾನ್ ಕೂಗಿದ್ದಕ್ಕೆ ವಿರೋಧಿಸಿದ್ದ ಮುಸ್ಲಿಂ ಸಮುದಾಯದ ಮುಖಂಡರು ಯುವಕನಿಗೆ ಬೈದಿದ್ದಾರೆ ಎನ್ನಲಾಗಿದೆ.

ಅನಂತರ ಪ್ರತಿಭಟನಾಕಾರರನ್ನು ಸ್ಥಳದಿಂದ ಪೊಲೀಸರು ವಾಪಸ್ ಕಳುಹಿಸಿದ್ದಾರೆ.

- Advertisement -

Latest News

error: Content is protected !!