Saturday, May 18, 2024
Homeತಾಜಾ ಸುದ್ದಿಅಕ್ರಮ ಆಸ್ತಿ ಪ್ರಕರಣದಲ್ಲಿ ಬೆಂಗಳೂರಿನ ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ಬಂಧನ; ಅಧಿಕಾರಿಯ ಅಕ್ರಮ ಆಸ್ತಿ...

ಅಕ್ರಮ ಆಸ್ತಿ ಪ್ರಕರಣದಲ್ಲಿ ಬೆಂಗಳೂರಿನ ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ಬಂಧನ; ಅಧಿಕಾರಿಯ ಅಕ್ರಮ ಆಸ್ತಿ ಕಂಡು ಲೋಕಾಯುಕ್ತ ಅಧಿಕಾರಿಗಳೇ ಸುಸ್ತು

spot_img
- Advertisement -
- Advertisement -

ಬೆಂಗಳೂರು; ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ಅವರನ್ನು ಬಂಧಿಸಲಾಗಿದೆ. ಇನ್ನು ನಿನ್ನೆ ತಹಶೀಲ್ದಾರ್​ ಅಜಿತ್ ರೈ ಮನೆ ಮೇಲೆ ದಾಳಿ ವೇಳೆ ಲೋಕಾಯುಕ್ತ ಪೊಲೀಸರು
ಲಕ್ಷಾಂತರ ನಗದು ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ಅಜಿತ್ ಆಸ್ತಿ ನೋಡಿ ಲೋಕಾಯುಕ್ತ ಪೊಲೀಸರೇ ಶಾಕ್ ಗೆ ಒಳಗಾಗಿದ್ದಾರೆ.

ಅಜಿತ್​ ರೈಗೆ ಸಂಬಂಧಿಸಿದ 10 ಕಡೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು 40 ಲಕ್ಷ ನಗದು, 1.90 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದು, . ದಾಳಿ ವೇಳೆ ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಸೇರಿದಂತೆ ಇತರೆ ಕಡೆಗಳಲ್ಲಿ ಬೇನಾಮಿ ಹೆಸರಿನಲ್ಲಿ ಅವರು ಆಸ್ತಿಯನ್ನು ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಪುತ್ತೂರು ತಾಲೂಕಿನ ಸೊರಕೆ ಮೂಲದ ಅಜಿತ್ ರೈ ಗೆ ಸರ್ಕಾರಿ ಸರ್ವೇಯರ್ ಆಗಿ ಕೆಲಸ ಮಾಡುತ್ತಿದ್ದ ತಂದೆ ಆನಂದ್ ನಿಧನದ ಬಳಿಕ ಅನುಕಂಪದ ಆಧಾರದಲ್ಲಿ ಅಜಿತ್ ಸರ್ಕಾರಿ ಕೆಲಸ ಸಿಕ್ಕಿತ್ತು. ಕಂದಾಯ ನಿರೀಕ್ಷಕರಾಗಿ ಆಗಿ ಬೆಂಗಳೂರಿನಲ್ಲೇ ಸರ್ಕಾರಿ ಕೆಲಸಕ್ಕೆ ನೇಮಕವಾಗಿದ್ದ ಇವರು ಅಲ್ಲಿಂದ ಭಡ್ತಿ ಪಡೆದು ಉಪ ತಹಶೀಲ್ದಾರ್ ಬಳಿಕ ತಹಶೀಲ್ದಾರ್ ಹುದ್ದೆಗೆ ನೇಮಕವಾಗಿದ್ದರು.

- Advertisement -
spot_img

Latest News

error: Content is protected !!