Monday, May 13, 2024
Homeಕರಾವಳಿಅಕ್ರಮ ಆಸ್ತಿ ಗಳಿಕೆ ಪ್ರಕರಣ;  ಪರಪ್ಪನ ಅಗ್ರಹಾರ ಸೇರಿದ ಅಜಿತ್ ರೈ

ಅಕ್ರಮ ಆಸ್ತಿ ಗಳಿಕೆ ಪ್ರಕರಣ;  ಪರಪ್ಪನ ಅಗ್ರಹಾರ ಸೇರಿದ ಅಜಿತ್ ರೈ

spot_img
- Advertisement -
- Advertisement -

ಬೆಂಗಳೂರು; ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ವಶದಲ್ಲಿದ್ದ ಅಜಿತ್ ರೈ ಯನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಲೋಕಾಯುಕ್ತ ಕಸ್ಟಡಿ ಅವಧಿ ಜು.6ಕ್ಕೆ ಮುಕ್ತಾಯವಾದ ಹಿನ್ನೆಲೆ ಅಜಿತ್ ರೈ ಅವರನ್ನು ಇಂದು ಕೋರ್ಟ್ಗೆ ಹಾಜರುಪಡಿಸಿದ ಲೋಕಾಯುಕ್ತ ಅಧಿಕಾರಿಗಳು, ಮತ್ತೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಅದರಂತೆ ಮತ್ತೆ ಆತನನ್ನು  ಲೋಕಾಯುಕ್ತ ಅಧಿಕಾರಿಗಳು ಕಸ್ಟಡಿಗೆ ಪಡೆದಿದ್ದು, ಸದ್ಯ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿದ್ದಾನೆ.

ಜೂನ್ 28 ರಂದು ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ದಾಳಿ ವೇಳೆ ಅಕ್ರಮ ಆಸ್ತಿ, ಲಕ್ಷಾಂತರ ರೂ ಹಣ ಪತ್ತೆಯಾಗಿತ್ತು. ಬೆಂಗಳೂರಿನ ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬರೋಬ್ಬರಿ 40 ಲಕ್ಷಕ್ಕೂ ಹೆಚ್ಚು ನಗದು ಸೇರಿದಂತೆ ವಿವಿಧ ಅಕ್ರಮ ಆಸ್ತಿಗಳನ್ನು ಪತ್ತೆ ಹಚ್ಚಿದ್ದರು. ದಾಳಿ ವೇಳೆ ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಸಿಕ್ಕಿದ್ದವು , ಅಜಿತ್ ರೈ ಸಂಬಂಧಿಕರು, ಸ್ನೇಹಿತರ ಹೆಸರಲ್ಲೂ ಆಸ್ತಿ ಪತ್ರಗಳು, ಅಲ್ಲದೇ ಆಪ್ತರ ಮನೆಯಲ್ಲಿ ನಾಲ್ಕು ಫಾರ್ಚೂನರ್ ಕಾರುಗಳು ಪತ್ತೆಯಾಗಿತ್ತು . ಅಜಿತ್ ಆಸ್ತಿಪತ್ರಗಳನ್ನು ಕಂಡು ಅಧಿಕಾರಿಗಳೇ ದಂಗಾಗಿದ್ದರು.

- Advertisement -
spot_img

Latest News

error: Content is protected !!